ಮಹದಾಯಿ ತೀರ್ಪಿನ ನಂತರ ಕಾಮಗಾರಿ: ಬಜೆಟ್ ಘೋಷಣೆ
TV5 Kannada5 July 2018 7:10 AM GMT
ಮಹದಾಯಿ ನದಿ ನೀರು ಹಂಚಿಕೆ ಕುರಿತ ತೀರ್ಪು ಆಗಸ್ಟ್ನಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ಈ ತೀರ್ಪು ಪ್ರಕಟಗೊಂಡ ನಂತರ ಆ ಭಾಗದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಕಟಿಸಿದರು.
ವಿಧಾನಸೌಧದಲ್ಲಿ ಗುರುವಾರ ಬಜೆಟ್ ಮಂಡಿಸಿದ ಕುಮಾರಸ್ವಾಮಿ, ಮಹದಾಯಿ ವಿವಾದ ಕುರಿತು ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಕಾಮಗಾರಿ ರೂಪಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ ವಿವಾದಾತ್ಮಕ ಮೇಕೆದಾಟು ಯೋಜನೆಗಳನ್ನು ಮುಂದುವರಿಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.
Next Story