ರಾಮಲಿಂಗಾರೆಡ್ಡಿಗೆ ಸೂಕ್ತ ಸ್ಥಾನಮಾನ: ಕೆ.ಸಿ ವೇಣುಗೋಪಾಲ್ ಭರವಸೆ

ಮುಂಬರುವ ಲೋಕಸಭಾ ಚುನಾವಣೆ ನಂತರ ಮಾಜಿ ಸಚಿವ ರಾಮಲಿಂಗಾರೆಡ್ಡಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುತ್ತೆ ಎಂದು ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ.

ಇಂದು ಬೆಳಿಗ್ಗೆ ಕುಮಾರಕೃಪ ಅತಿಥಿ ಗೃಹದ ಮುಂದೆ ರಾಮಲಿಂಗಾರೆಡ್ಡಿ ಬೆಂಬಲಿಗರು ಹಿರಿಯ ನಾಯಕರಾಗಿರುವ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೊಡಬೇಕು ಎಂದು ಆಗ್ರಹಿಸಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ನೇತೃತ್ವದಲ್ಲಿ ಹಾಲಿ ಮೇಯರ್ ಗಂಗಾಂಬಿಕೆ, ಮಾಜಿ ಮೇಯರ್ ಪದ್ಮಾವತಿ ಮತ್ತಿತರ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದರು.

ಈ ವೇಳೆ ರಾಮಲಿಂಗಾರೆಡ್ಡಿ ಬೆಂಬಲಿಗರ ಮನವಿ ಸ್ವೀಕರಿಸಿದ ಕೆ.ಸಿ ವೇಣುಗೋಪಾಲ್ ‌ರಾಮಲಿಂಗಾರೆಡ್ಡಿ ಅವರನ್ನು ನಾವು ಕಡೆಗಣಿಸಿಲ್ಲ. ಅವರಿಗೆ ಸೂಕ್ತ ಸ್ಥಾನ ಮಾನ ನೀಡ್ತೀವಿ ಎಂದು ಬೆಂಬಲಿಗರಿಗೆ ಭರವಸೆ ನೀಡಿದರು.

ವೇಣುಗೋಪಾಲ್ ಭೇಟಿ ಬಳಿಕ ಮಾಜಿ ಮೇಯರ್ ಮಂಜುನಾಥ್ ರೆಡ್ಡಿಸಂಪುಟ ಪುನಾರಚನೆ ಸಂದರ್ಭದಲ್ಲಿ ಹಿರಿಯರಾದ ರಾಮಲಿಂಗಾರೆಡ್ಡಿ ಕಡೆಗಣಿಸಿರುವುದು ಸರಿಯಲ್ಲ. ಬಿಬಿಎಂಪಿ ಆಡಳಿತ ಕಾಂಗ್ರೆಸ್ ತೆಕ್ಕೆಗೆ ಬರಲು ರಾಮಲಿಂಗಾರೆಡ್ಡಿ ಅವರ ಪಾತ್ರ ಅತ್ಯಂತ ಮುಖ್ಯವಾಗಿದೆ. ಜತಗೆ ಯಾವುದೇ ಖಾತೆಯನ್ನು ನೀಡಿದಲ್ಲಿ ಸಮರ್ಪಕವಾಗಿ ನಿಭಾಯಿಸಿರುವ ಕೀರ್ತಿಯೂ ಅವರದ್ದಾಗಿದೆ. ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳದಿರುವುದರಿಂದ ನಗರದ ಕಾಂಗ್ರೆಸ್ ಕಾರ್ಯಕರ್ತರಿಗೆ ನೋವಾಗಿದೆ ಎಂಬುದನ್ನು ವೇಣುಗೋಪಾಲ್ ಗಮನಕ್ಕೆ ತಂದಿರುವುದಾಗಿ ತಿಳಿಸಿದರು.

Recommended For You

About the Author: TV5 Kannada

Leave a Reply

Your email address will not be published. Required fields are marked *