‘ಕೆ.ಎಸ್ ಈಶ್ವರಪ್ಪಗೆ ಈ ಭಾಗ ಸರಿಯಾಗಿ ಕೆಲಸ ಮಾಡುತ್ತಿಲ್ವಾಂತೆ ‘ – ಸಿದ್ದರಾಮಯ್ಯ

ವಿಜಯಪುರ: ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪಗೆ ಮೆದುಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಹೀಗಾಗಿ ಅವರು ಏನೇನೋ ಮಾತನಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪಗೆ ಮೆದುಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಹೀಗಾಗಿ ಅವರು ಏನೇನೋ ಮಾತನಾಡುತ್ತಾರೆ ಎಂದು ಬಿಜೆಪಿ ಮುಖಂಡ ಈಶ್ವರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಮಾತು ಮುಂದುವರೆಸಿದ ಸಿದ್ದರಾಮಯ್ಯ, ನಮ್ಮ ಸಮಿಶ್ರ ಸರಕಾರ ಸುಭದ್ರವಾಗಿದ್ದು,  ಕಾಂಗ್ರೆಸ್ ಪಕ್ಷದ ಶಾಸಕರು ಎಲ್ಲೂ‌ ಹೋಗುವುದಿಲ್ಲ ಎಂದ ಅವರು, ‘ಆಡಿಯೋ ಪ್ರಕರಣ ಈಗಾಗಲೇ ಮುಖ್ಯಮಂತ್ರಿಗಳು ಎಸ್ ಐಟಿ ತನಿಖಾ ತಂಡ ರಚನೆ ಮಾಡಿದ್ದಾರೆ. ನಾವು ಯಾರ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಹೀಗಾಗಿ ಬಿಜೆಪಿಯವರು ಸಂವಿಧಾನದ ಮೇಲೆ ನಂಬಿಕೆ ಇಲ್ಲದವರು, ಆಗಾಗಿ ‌ಎಸ್ ಐಟಿ ತನಿಖೆಗೆ ವಿರೋಧಿಸುತ್ತಿದ್ದಾರೆ ಎಂದು ತಿಳಿಸಿದರು.

ಇಲ್ಲಿ ಯಾರು ತಪ್ಪು ಮಾಡಿರುತ್ತಾರೆ ಅವರು ಶಿಕ್ಷೆ ಅನುಭವಿಸಲೇ ಬೇಕು. ಶಾಸಕರ ಅನರ್ಹತೆ ಬಗ್ಗೆ ಸ್ಪೀಕರ್ ಕ್ರಮಕೈಗೊಳ್ಳುತ್ತಾರೆ. ಇನ್ನು, ಲೋಕಸಭಾ ಸೀಟುಗಳು ಹಂಚಿಕೆ ವಿಚಾರದಲ್ಲಿ ಎರಡು ಪಕ್ಷದ ನಡುವೆ ಮಾತುಕತೆ ಇನ್ನು ಪೂರ್ಣಗೊಂಡಿಲ್ಲ ಎಂದು ಸಿದ್ದರಾಮಯ್ಯ ನುಡಿದರು.

ಸದ್ಯ, ಬಿಜೆಪಿಯವರು ಸದನದಲ್ಲಿ ಬರಗಾಲ ಬಗ್ಗೆ ಚರ್ಚೆ ಮಾಡದೆ, ಸದನದ ಹೊರಗಡೆ‌ಹೆಚ್ಚು ಮಾತನಾಡುತ್ತಾರೆ. ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನ ಉದ್ಘಾಟನೆಯಲ್ಲಿ ಪಾಲ್ಗೊಂಡು ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Recommended For You

About the Author: TV5 Kannada

Leave a Reply

Your email address will not be published. Required fields are marked *