‘ನನ್ನ ತಾಯಿಯ ಬಗ್ಗೆ ಮಾತನಾಡಿದ್ದಾರೆ’ – ಸಿಎಂ ಕುಮಾರಸ್ವಾಮಿ

ಹುಬ್ಬಳ್ಳಿ: ಇಂದಿನಿಂದ ನಾನು ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರ ಕೈಗೊಳ್ಳುತ್ತಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಟ್ಟಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಇಂದಿನಿಂದ ನಾನು ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರ ಕೈಗೊಳ್ಳುತ್ತಿದ್ದೇನೆ. ನನ್ನ ಕುಟುಂಬದ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ಹೊರಹಾಕಿದರು.

ಇನ್ನು ಎಲ್ಲವನ್ನೂ ನಾನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಹ ನನ್ನ ತಾಯಿ ಬಗ್ಗೆ ಮಾತನಾಡಿದ್ದಾರೆ. ನನ್ನ ತಾಯಿಯನ್ನ ರಾಜಸಭಾ ಸದಸ್ಯೆಯಾಗಿ ಆಯ್ಕೆ ಮಾಡಿ ಎಂದಿದ್ದಾರೆ. ಅವರು ನನ್ನ ತಾಯಿ ವ್ಯಕ್ತಿತ್ವದ ಬಗ್ಗೆ ತಿಳಿದುಕೊಂಡು ಮಾತನಾಡಲಿ ಎಂದು ತಿಳಿಸಿದರು.

ಅಲ್ಲದೇ ಪ್ರಧಾನಿ ಮೋದಿ ಭಾಷಣದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಅವರು ಪ್ರಧಾನಿ ಹುದ್ದೆಯ ಘನತೆಗೆ ತಕ್ಕನಾಗಿ ಮಾತನಾಡುತ್ತಿಲ್ಲ. ರಾಷ್ಟ್ರೀಯ ಜಲನೀತಿ ತರಲು ಅಡ್ಡಿಪಡಿಸಿದ್ದರು. ಕರ್ನಾಟಕ ಸರ್ಕಾರ  ಅಸಮರ್ಥ ಎಂದು ಕರೆದಿದ್ದಾರೆ. ನಮ್ಮದು ಸಮರ್ಥ ಸರ್ಕಾರ, ಮೋದಿಯದು ಅಸಮರ್ಥ ಸರ್ಕಾರ ಎಂದು ಹೇಳಿದರು.

ಸದ್ಯ ರಾಜ್ಯದಲ್ಲಿ ಬರಗಾಲದ ಇದೆ ಆದ್ರೆ, ಉದ್ಯೋಗ ಖಾತ್ರಿ ಯೋಜನೆಗೆ ಹಣ ನೀಡಿಲ್ಲ. ರಾಜ್ಯ ಸರ್ಕಾರ ಉದ್ಯೋಗ ಖಾತ್ರಿಗೆ ಹಣ ನೀಡಿ ಜನರನ್ನು ಗುಳೆ ಹೋಗುವುದುದನ್ನು ತಪ್ಪಿಸಿದ್ದೇನೆ ಎಂದು ಕೇಂದ್ರ ಸರ್ಕಾರ ದಿವಾಳಿ ಸರ್ಕಾರ ಎಂದು ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Recommended For You

About the Author: TV5 Kannada

Leave a Reply

Your email address will not be published. Required fields are marked *