ಶ್ರೀಲಂಕಾದಲ್ಲಿ ಬಲಿಯಾದವರ ಮೃತದೇಹ ಶಿಫ್ಟ್, ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ

ಬೆಂಗಳೂರು:  ಶ್ರೀಲಂಕಾ ಸರಣಿ ಬಾಂಬ್​ ಸ್ಫೋಟದಲ್ಲಿ ಕನ್ನಡಿಗರ 8 ಜನ ಮೃತಪಟ್ಟಿದ್ದಾರೆ. ಈಗಾಗಲ್ಲೇ ನಿನ್ನೆ ತಡರಾತ್ರಿ 5 ಜನ ಮೃತದೇಹಗಳು ಸ್ವಗ್ರಾಮಕ್ಕೆ ಆಗಮಿಸಿದ್ದು, ಇನ್ನೂ ಮೂರು ಮೃತದೇಹಗಳು ಮಧ್ಯಾಹ್ನ 12.30ಕ್ಕೆ ಆಗಮಿಸಲಿದೆ. ಈ ಮೂವರು ತುಮಕೂರಿನ ನಿವಾಸಿ ರಮೇಶ್., ಅಡಕಮಾರನಹಳ್ಳಿ ನಿವಾಸಿ ಮಾರೇಗೌಡ ಹಾಗೂ ಹಾರೋ ಕ್ಯಾತನಹಳ್ಳಿಯ ಪುಟ್ಟರಾಜ ಈ ಮೂವರು ಸಹ ಮೃತ  ದುರ್ದೈವಿಗಳಾಗಿದ್ದಾರೆ.

ಸರಣಿ ಬಾಂಬ್ ಸ್ಫೋಟದಲ್ಲಿ 8 ಮಂದಿ ಕನ್ನಡಿಗರು ದಾರುಣವಾಗಿ ಮೃತಪಟ್ಟಿದ್ದಾರೆ. ಇದೀಗ ಅದರಲ್ಲಿ ಒಟ್ಟು ಐವರ ಮೃತದೇಹ ಬೆಂಗಳೂರಿಗೆ ರವಾನೆಯಾಗಿದೆ.

ಯುಎಲ್-173 ಶ್ರೀಲಂಕಾ ಏರ್ ಲೈನ್ಸ್ ವಿಮಾನದಲ್ಲಿ ನಾಲ್ವರ ಮೃತದೇಹ ಶಿಫ್ಟ್ ಮಾಡಲಾಗಿದ್ದು, ತಡರಾತ್ರಿ 2.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನವಾಗಿದೆ. ಇದೇ ವೇಳೆ ನೆಲಮಂಗಲ ಶಾಸಕ ಶ್ರೀನಿವಾಸ್, ಇ.ಕೃಷ್ಣಪ್ಪ ಬೆಂಗಳೂರಿಗೆ ಆಗಮಿಸಿ ಅಂತಿಮ ದರ್ಶನ ಪಡೆದರು.

ಶಾಸಕ ಶ್ರೀನಿವಾಸ್ ಮಾತನಾಡಿ, ಘಟನೆಯಲ್ಲಿ ಮೃತಪಟ್ಟವರೆಲ್ಲರೂ ನಮ್ಮ ಆಪ್ತರೇ ಆಗಿದ್ದು, ತೀರಾ ನೋವಾಗಿದೆ ಎಂದರು. ಇದೇ ವೇಳೆ ಮಾತನಾಡಿದ ಜೆಡಿಎಸ್ ಮುಖಂಡ ಇ.ಕೃಷ್ಣಪ್ಪ, ಏಳೂ ಮೃತದೇಹಗಳ ರವಾನೆಗೆ ಎಲ್ಲಾ ಪ್ರಕ್ರಿಯೆ ಮುಕ್ತಾಯವಾಗಿದೆ. ಕಳೆಬರಹ ಪತ್ತೆಗೆ ಸ್ವಲ್ಪ ಸಮಯ ಹಿಡೀತು. ಫೋಟೋ ನೋಡಿ ದೇಹ ಗುರುತು ಪತ್ತೆ ಹಚ್ಚಿದೆವು. ದುರಾದೃಷ್ಟವಶಾತ್ ಏಳೂ ಸ್ನೇಹಿತರನ್ನು ಕಳೆದುಕೊಂಡಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮೃತದೇಹಗಳ ಅಂತಿಮ ದರ್ಶನಕ್ಕೆ ಅನುವು ಮಾಡಿಕೊಡಲಾಗಿದ್ದು, ಲಕ್ಷ್ಮೀನಾರಾಯಣ, ಶಿವಕುಮಾರ್ ಮೃತದೇಹ ಸಾರ್ವಜನಿಕ ದರ್ಶನಕ್ಕೆ ಅನುವು ಮಾಡಲಾಗಿದ್ದು, ಕೆಲ ಹೊತ್ತಲ್ಲಿ ನೆಲಮಂಗಲದ ಅಂಬೇಡ್ಕರ್ ಕಾಲೇಜು ಮೈದಾನಕ್ಕೆ ಮೃತದೇಹಗಳು ಬರಲಿದೆ, ಎರಡರಿಂದ ಮೂರು ಗಂಟೆಗಳ ಕಾಲ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಲಾಗಿದ್ದು,  ಅಂತಿಮ ದರ್ಶನ ಪಡೆಯಲು ಸಿಎಂ ಕುಮಾರಸ್ವಾಮಿ ಆಗಮಿಸುವ ಸಾಧ್ಯತೆ ಇದೆ,

ಇನ್ನೂ ಮುಖ್ಯಮಂತ್ರಿ ಕುಮಾರಸ್ವಾಮಿ ದರ್ಶನದ ನಂತರ ಸ್ವಗ್ರಾಮಕ್ಕೆ ಮೃತದೇಹಗಳು ರವಾನೆಯಾಗಲಿದ್ದು,  ಲಕ್ಷ್ಮೀನಾರಾಯಣ ಸ್ವಗ್ರಾಮ ಕಾಚನಹಳ್ಳಿಯಲ್ಲಿ ಅಂತ್ಯಕ್ರಿಯೆಗೆ ವ್ಯವಸ್ಧೆ ಮಾಡಲಾಗಿದೆ, ಶಿವಕುಮಾರ್ ಅವರ ಸ್ವಗ್ರಾಮ ಗೋವೇನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Recommended For You

About the Author: Dayakar

Leave a Reply

Your email address will not be published. Required fields are marked *