ಟೀಕಾಕಾರರ ವಿರುದ್ಧ ಟ್ವೀಟರ್ ಟೀಕಾಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್ ಟಾಕ್ ಮುಂದುವರೆಸಿದ್ದು, ಜಿ.ಟಿ.ದೇವೇಗೌಡರ ಬಗ್ಗೆ ನಿನ್ನೆ ಮಾತನಾಡಿದ್ದಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಗೆಳೆಯ ಜಿ.ಟಿ.ದೇವೇಗೌಡರು ಇತ್ತೀಚೆಗೆ ನನ್ನ ವಿರುದ್ಧ ಮಾತನಾಡಿಲ್ಲ ನಿಜ. ಆದರೆ ಮೈಸೂರಲ್ಲಿ ಜೆಡಿಎಸ್‌ನವರು ಬಿಜೆಪಿಗೆ ಮತ ಹಾಕಿದ್ದಾರೆಂಬ ಅವರ ಹೇಳಿಕೆ ಸತ್ಯವಾಗಿದ್ದರೂ ಅನಗತ್ಯವಾಗಿತ್ತು. ಇದರಿಂದಾಗಿ ಕೆರಳಿದ ನಮ್ಮ ಕಾರ್ಯಕರ್ತರು ಜೆಡಿಎಸ್ ವಿರುದ್ಧ ಮಾತನಾಡತೊಡಗಿದ್ದರು. ಮೈತ್ರಿಕೂಟದಲ್ಲಿ ಇಂತಹದನ್ನು ಮಾಡಬಾರದು ಎಂದು ಹೇಳಿದ್ದಾರೆ.

ನನ್ನ ಯಾವ ಕಾರ್ಯಕ್ರಮವೂ Populist ಇಲ್ಲವೇ ತಾತ್ಕಾಲಿಕ ಅಲ್ಲ. ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ, ಇವುಗಳನ್ನು ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ. ಜಾಗೃತ ಮತದಾರರು ಇರುವವರೆಗೆ ಇವೆಲ್ಲ ಶಾಶ್ವತ ಕಾರ್ಯಕ್ರಮಗಳು. ಟೀಕಾಕಾರರಿಗೆ ನೆನಪಿರಲಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ತಮ್ಮ ವಿರುದ್ಧ ಟೀಕೆ ಮಾಡುವವರಿಗೆ ಉತ್ತರ ಕೊಟ್ಟಿದ್ದಾರೆ.

Recommended For You

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.