‘ರಾಷ್ಟ್ರೀಯ ಹೆದ್ದಾರಿ ಬಂದ್​ ಮಾಡಿ ಹೋರಾಟ ನಡೆಸಿ’- ಮಾಜಿ ಸಚಿವ ಜನಾರ್ದನ ರೆಡ್ಡಿ

ಬಳ್ಳಾರಿ: ಬಳ್ಳಾರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ನೆನೆಗುದಿಗೆ ಬಿದ್ದಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಬಳ್ಳಾರಿಯಲ್ಲಿ ಬುಧವಾರ ಐ ಕ್ಯಾಂಪ್ ಉದ್ಘಾಟನೆ ಮಾಡಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಸಚಿವನಾಗಿದ್ದಾಗ ಯಡಿಯೂರಪ್ಪ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅನುದಾನ ಕೊಟ್ಟಿದ್ದರು. ಆದರೆ, ಇನ್ನೂ ಅದು ಪೂರ್ಣವಾಗಿಲ್ಲ ಎಂದು ಅವರು ನುಡಿದರು.

ಆಸ್ಪತ್ರೆ ಹಾಗೂ ಜಿಲ್ಲೆಯ ಅಭಿವೃದ್ದಿಗೆ ಎಲ್ಲರು ಒಟ್ಟಾಗಿ ಕೆಲಸ ಮಾಡಬೇಕು. ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ನಾಗೇಂದ್ರ ನನನೆ ಮಾತಿಗೆ ಹೆಚ್ಚು ಬೆಲೆ, ಗೌರವ ಕೊಡುತ್ತಾರೆ. ಅವರೊಟ್ಟಿಗೆ ಶ್ರೀರಾಮುಲು, ಸೋಮಶೇಕರ್​ ರೆಡ್ಡಿ ಅವರು ಕಲ್ಯಾಣ ಶ್ರೀಗಳ ನೇತೃತ್ವದಲ್ಲಿ ಹೋರಾಟ ಮಾಡಿ ಎಂದಿದ್ದಾರೆ.

ಇನ್ನು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಹೋರಾಟ ಮಾಡಿ. ಆಗ ಸರ್ಕಾರ ನಿಮ್ಮ ಸಮಸ್ಯೆಯನ್ನು ಬಗೆ ಹರಿಸುತ್ತದೆ. ಸಿಎಂ ಅವರು 24 ಗಂಟೆಗಳಲ್ಲಿ ಸ್ಪಂದಿಸುತ್ತಾರೆ ಎಂದು ಅವರು ಸಲಹೆ ನೀಡಿದ್ದಾರೆ.

Recommended For You

About the Author: Manjunatha D

Leave a Reply

Your email address will not be published. Required fields are marked *