‘ಉತ್ತರ ಕರ್ನಾಟಕವನ್ನ ಪೂರ್ಣ ಪ್ರಮಾಣದಲ್ಲಿ ನಿರ್ಲಕ್ಷ್ಯಿಸಲಾಗಿದೆ’

ಬೆಂಗಳೂರು: ಉತ್ತರ ಕರ್ನಾಟಕವನ್ನ ಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಸಿಎಂ ಕುಮಾರಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್‌ಗೆ ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗೆ ಪತ್ರ ಬರೆದು ಹೊರಟ್ಟಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವ ಸ್ಥಾನ ನೀಡುವಲ್ಲಿ, ಅನುದಾನ ಹಂಚಿಕೆಯಲ್ಲಿ ಜೆಡಿಎಸ್ ಪಕ್ಷದಿಂದ ತಾರತಮ್ಯ ನಡೆಯುತ್ತಿದೆ. ಮಂಡ್ಯಕ್ಕೆ ಕೋಟಿ ಕೋಟಿ ಅನುದಾನ ನೀಡಿದ್ದಾರೆ. ಹಾಸನ, ರಾಮನಗರಕ್ಕೂ ಹೆಚ್ಚಿನ ಅನುದಾನ ನೀಡಲಾಗಿದೆ.

ಉತ್ತರ ಕರ್ನಾಟಕವನ್ನ ಪೂರ್ಣ ಪ್ರಮಾಣದಲ್ಲಿ ನಿರ್ಲಕ್ಷ್ಯಿಸಲಾಗಿದೆ ಎಂದು ಅಡ್ವೋಕೇಟ್ ಜನರಲ್ ನೇಮಕ ವಿಚಾರ ಮುಂದಿಟ್ಟುಕೊಂಡು ಮೈತ್ರಿ ಸರ್ಕಾರಕ್ಕೆ ಬಸವರಾಜ್ ಹೊರಟ್ಟಿ ಬಿಸಿ ಮುಟ್ಟಿಸಿದ್ದಾರೆ.

Recommended For You

About the Author: TV5 Kannada

Leave a Reply

Your email address will not be published. Required fields are marked *