ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಭದ್ರತೆಯ ಸುಳಿಗೆ ಸಿಲುಕಿ ತೊಳಲಾಡುತ್ತಿರುವುದರ ನಡುವೆಯೇ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಆಪ್ತ ಹಾಗೂ ಸಚಿವ ಸಾರಾ ಮಹೇಶ್ ಅವರು ಬಿಜೆಪಿ ಹಿರಿಯ ಮುಖಂಡರನ್ನು ಭೇಟಿ ಮಾಡಿ ಮಾತುಕತೆ ನಡಸಿದ್ದು, ಜೆಡಿಎಸ್, ಬಿಜೆಪಿಗೆ ಬೆಂಬಲ ನೀಡಲು ಮುಂದಾಗಿದೆಯೇ ಎಂಬ ಮಾತುಗಳು ಕೇಳಿಬರುತ್ತಿವೆ ಆದರೆ ಇದೆಲ್ಲದಕ್ಕೂ ಮುಖ್ಯಮಂತ್ರಿಗಳು ಟ್ವೀಟ್ಸ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಇಂತಹ ಸಂದರ್ಭದಲ್ಲಿ KSTDC ನಿರ್ವಹಿಸುವ ಕುಮಾರಕೃಪಾ ಅತಿಥಿ ಗೃಹದ ಹೊಸ ಕಟ್ಟಡಕ್ಕೆ ಕಾರ್ಯ ನಿಮಿತ್ತ ತೆರಳಿದ್ದ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಅವರ ಬಿಜೆಪಿ ನಾಯಕರೊಂದಿಗಿನ ಭೇಟಿ ಆಕಸ್ಮಿಕ, ಮಾತುಕತೆ ಸೌಜನ್ಯದ್ದು, ಅಷ್ಟೇ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ಸಾರಾ ಮಹೇಶ್ ಹಾಗೂ ಬಿಜೆಪಿ ನಾಯಕ ಭೇಟಿ ಆಕಸ್ಮಿಕ ಅಷ್ಟೆ. ರಾಜಕೀಯ ಬಿಕ್ಕಟ್ಟಿನ ನಡುವೆಯೂ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮತ್ತಷ್ಟು ಗಟ್ಟಿಯಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ಬಿಜೆಪಿ-ಜೆಡಿಎಸ್ ಸರ್ಕಾರ ರಚನೆ ಕೇವಲ ವದಂತಿ ಎಂದಿದ್ದಾರೆ.
ಇಂತಹ ಸಂದರ್ಭದಲ್ಲಿ KSTDC ನಿರ್ವಹಿಸುವ ಕುಮಾರಕೃಪಾ ಅತಿಥಿ ಗೃಹದ ಹೊಸ ಕಟ್ಟಡಕ್ಕೆ ಕಾರ್ಯ ನಿಮಿತ್ತ ತೆರಳಿದ್ದ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಅವರ ಬಿಜೆಪಿ ನಾಯಕರೊಂದಿಗಿನ ಭೇಟಿ ಆಕಸ್ಮಿಕ, ಮಾತುಕತೆ ಸೌಜನ್ಯದ್ದು, ಅಷ್ಟೇ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಾಗಿಲ್ಲ.
2/2— H D Kumaraswamy (@hd_kumaraswamy) July 11, 2019
ರಾಜ್ಯದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸುಭದ್ರವಾಗಿದೆ. ವಿಧಾನಮಂಡಲ ಅಧಿವೇಶನ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಿದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ಸ್ ಮಾಡಿದ್ದಾರೆ.