ಪರಿಸ್ಥಿತಿ ಕೈಮೀರಿದೆ ಏನೇ ಸರ್ಕಸ್ ಮಾಡಿದ್ರು ಪ್ರಯೋಜನವಿಲ್ಲ ಯಾರು ಯಾರಿಗೆ ಹೇಳಿದರು?

ಬೆಂಗಳೂರು: ಅತೃಪ್ತ ಕಾಂಗ್ರೆಸ್​ ಶಾಸಕ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ಯಲಹಂಕ ಬಿಜೆಪಿ ಶಾಸಕ ಎಸ್​.ಆರ್​ ​ ವಿಶ್ವನಾಥ್ ಈಗ ಇವರಿಬ್ಬರ ನಡುವೆ ನಡೆದ ಮಾತುಕತೆ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವ ಬಳಿ ವರದಿ ಮಾಡಿದ್ದಾರೆ ಎನ್ನಲಾಗಿದೆ.​

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ ಯಡಿಯೂರಪ್ಪ ಸೂಚನೆ ಮೇರೆಗೆ ರಾಮಲಿಂಗರೆಡ್ಡಿ ಭೇಟಿ ಮಾಡಿದ ಎಸ್​. ಆರ್​ ವಿಶ್ವನಾಥ್, ಸಿಎಂ ಹೆಚ್​.ಡಿ ಕುಮಾರಸ್ವಾಮಿ ಬಹುಮತ ಸಾಬೀತುಪಡಿಸಲು ಅವಕಾಶ ಕೇಳಿದ್ದರ ಬಗ್ಗೆ ಚರ್ಚೆ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್​ಗೆ ಮತ್ತೆ ಬೆಂಬಲ ಇಲ್ಲ ಕೊಡಲ್ಲ ಎಂದು ರಾಮಲಿಂಗಾರೆಡ್ಡಿ ಅವರು ಹೇಳಿದ್ದಾರೆ ಎಂದು ಹೇಳಲಾಗಿದೆ.

ಸದ್ಯ ಈಗಾಗಲೇ ರಾಜೀನಾಮೆ ಕೊಟ್ಟಾಗಿದೆ. ಮತ್ತೆ ರಾಜೀನಾಮೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ, ಈ ಬಗ್ಗೆ ಮೊದಲೇ ಯೋಚಿಸಬೇಕಿತ್ತು. ಹಿರಿಯ ಮುಖಂಡರನ್ನು ಪಕ್ಷ ಸರಿಯಾಗಿ ನಡೆಸಿಕೊಳ್ಳಲಿಲ್ಲ, ರಾಜೀನಾಮೆ ನೀಡಿದ ಬಳಿಕ ಕೆಲವರಿಗೆ ತಪ್ಪಿನ ಅರಿವಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನು ಪರಿಸ್ಥಿತಿ ಕೈಮೀರಿದ್ದರಿಂದ ಈಗ ಏನೇ ಸರ್ಕಸ್ ಮಾಡಿ ಪ್ರಯೋಜನವಿಲ್ಲ, ಎಲ್ಲ ಅತೃಪ್ತ ಶಾಸಕರು ರಾಜೀನಾಮೆ ವಾಪಸ್ ಪಡೆಯಲ್ಲ, ಎಲ್ಲರೂ ಬಲವಾಗಿ ನಿರ್ಧಾರ ಮಾಡಿ ರಾಜೀನಾಮೆ ಕೊಟ್ಟಿದ್ದಾರೆ ಎಂದು ರಾಮಲಿಂಗಾರೆಡ್ಡಿ ಜೊತೆ ನಡೆದ ಚರ್ಚೆಯ ವಿವರವನ್ನು ಬಿಎಸ್ ವೈ ಮುಂದೆ ಎಸ್​.ಆರ್​ ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ.

ಅಲ್ಲದೇ ಕುಮಾರಸ್ವಾಮಿ ರಾಜೀನಾಮೆ ಬಳಿಕ ಸರ್ಕಾರ ರಚನೆಗೆ ಬಿಜೆಪಿಗೆ ಅವಕಾಶವಿದೆ. ಅದಕ್ಕೆ ನಿಮ್ಮ ಬೆಂಬಲ ಬೇಕು ಎಸ್.ಆರ್​​ ವಿಶ್ವನಾಥ್​​ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಂಗಳವಾರ ಈ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ ಅಲ್ಲಿಯ ವರೆಗೆ ಕಾದು ನೋಡೋಣ ಎಂದು ಮಾತುಕತೆ ನಡೆದಿದೆ.

Recommended For You

About the Author: TV5 Kannada

Leave a Reply

Your email address will not be published. Required fields are marked *