ಸಿ.ಪಿ.ಯೋಗೇಶ್ವರ್‌ಗೆ ಸಿಗಲಿದೆಯೇ ಸಚಿವ ಸಂಪುಟದ ಭಾಗ್ಯ..?

ರಾಮನಗರ: ರಾಮನಗರ, ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್‌ಗೆ ಟಕ್ಕರ್ ಕೊಟ್ಟ ರಾಜಕಾರಣಿ ಸಿ.ಪಿ.ಯೋಗೇಶ್ವರ್‌ಗೆ, ರಾಜ್ಯದಲ್ಲಿ ರಚನೆಯಾಗಲಿರುವ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.

ಕಳೆದ ಎಲೆಕ್ಷನ್‌ನಲ್ಲಿ ಅನಿತಾ ಕುಮಾರಸ್ವಾಮಿ ವಿರುದ್ಧ ಸೋಲುಂಡಿದ್ದ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಮೈತ್ರಿ ಸರ್ಕಾರ ಬೀಳಿಸುವುದರಲ್ಲಿ ಫುಲ್ ಬ್ಯುಸಿಯಾಗಿದ್ದರು. ದೋಸ್ತಿ ಸರ್ಕಾರದ ಅಂತ್ಯ ಹಾಡಲು ಪ್ರಮುಖ ಪಾತ್ರ ವಹಿಸಿದ್ದರು. ಅತೃಪ್ತ ಶಾಸಕರನ್ನು ಮುಂಬೈಗೆ ಕರೆದೊಯ್ಯುವಲ್ಲಿ ಯಶಸ್ವಿಯಾಗಿದ್ದರು.

ಇನ್ನು ಲೋಕಸಭಾ ಚುನಾವಣೆಯಲ್ಲೂ ಕೂಡ, ರಾಮನಗರ ಮತ್ತು ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಸಂಘಟನೆ ಮಾಡಿರುವ ಹಿನ್ನೆಲೆ ಸಿ.ಪಿ.ಯೋಗೇಶ್ವರ್‌ಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ.

Recommended For You

About the Author: Dayakar

Leave a Reply

Your email address will not be published. Required fields are marked *