ರಾಷ್ಟ್ರೀಯ ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಆ ಮೂವರ ಹೆಸರು ಪ್ರಸ್ತಾಪ!

ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯನ್ನು ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ನಡೆದಿದೆ. ಸಭೆಯಲ್ಲಿ ಪಕ್ಷದ ಮುಖಂಡರಾದ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್. ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್, ಸಿದ್ದರಾಮಯ್ಯ, ಅಶೋಕ್ ಗೆಹ್ಲೋಟ್, ಮುಖುಲ್ ವಾಸ್ನಿಕ್, ಜ್ಯೋತಿರಾಧಿತ್ಯ ಸಿಂಧ್ಯಾ, ಪ್ರಿಯಾಂಕ ಗಾಂಧಿ ಹಾಗೂ ಎ.ಕೆ. ಆ್ಯಂಟನಿ ಮತ್ತಿತರರು ಭಾಗಿಯಾಗಿದ್ದರು.

ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ವಿಚಾರದ ಬಗ್ಗೆ ಚರ್ಚೆ ನಡೆದಿದೆ. ರಾಹುಲ್​ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಆ ಸ್ಥಾನಕ್ಕೆ ಬೇರೆ ಯಾರನ್ನು ನೇಮಕ ಮಾಡಿರಲಿಲ್ಲ ಈ ಸಂಬಂಧವಾಗಿ ಈ ಸಭೆ ನಡೆಸಲಾಗಿದೆ ಜೊತೆಗೆ ಪಕ್ಷ ಸಂಘಟನೆ, ನೂತನ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆ ಕೂಡ ನಡೆಸಲಾಗಿದೆ.

ಸದ್ಯ ಎಐಸಿಸಿ ಅಧ್ಯಕ್ಷರ ಆಯ್ಕೆಗೆ ಮೂವರ ಹೆಸರು ಪ್ರಸ್ತಾಪವಾಗಿದ್ದು ಅದರಲ್ಲಿ ಪ್ರಮುಖರಾದ ಮಲ್ಲಿಕಾರ್ಜುನ ಖರ್ಗೆ, ಸುಶೀಲ್ ಕುಮಾರ್ ಶಿಂಧೆ ಹಾಗೂ ಮುಕುಲ್ ವಾಸ್ನಿಕ್ ಹೆಸರುಗಳು ಕೇಳಿ ಬಂದಿವೆ ಇದರೊಟ್ಟಿಗೆ ನಾಲ್ವರು ವರ್ಕಿಂಗ್ ಪ್ರೆಸಿಡೆಂಟ್ ಆಯ್ಕೆ ಬಗ್ಗೆಯೂ ಚರ್ಚೆ  ಮಾಡಲಾಗಿದೆ.

ಇನ್ನು ಕಾರ್ಯಾಧ್ಯಕ್ಷ ಹುದ್ದೆಯಲ್ಲಿ ರಾಜ್ಯದ ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಅವರ ಹೆಸರು ಪ್ರಸ್ತಾಪ ಮಾಡಲಾಗಿದೆ. ನೂತನ ಅಧ್ಯಕ್ಷ, ನಾಲ್ವರು ಕಾರ್ಯಾಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆ ನಡೆದಿದೆ ಆದರೆ ಇನ್ನೂ ಯಾವುದೇ ಅಂತಿಮ ನಿರ್ಧಾರವಾಗಿಲ್ಲ.

Recommended For You

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.