ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಳುಹಿಸಿದ್ದು ಯಾರು ಗೊತ್ತಾ.?

ಬೆಂಗಳೂರು:  ರಾಜ್ಯದ 16 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂ ಕು ಎಂದು ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಎಷ್ಟು ಜಿಲ್ಲೆ ಜಲಮಯ…ಎಷ್ಟು ನಷ್ಟ..?

ಗೃಹ ಕಚೇರಿ ಕೃಷ್ಞಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ 6000 ಕೋಟಿ ರೂ. ನಷ್ಟದ ಅಂದಾಜು ಮಾಡಿದ್ದು, 3000 ಕೋಟಿ ರೂ. ಬಿಡುಗಡೆಗೆ ಮನವಿ ಮಾಡಲಾಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಪ್ರಧಾನಿ ರಾಜ್ಯಕ್ಕೆ ಕಳುಹಿಸಿದ್ದು, ವಸ್ತು ಸ್ಥಿತಿ ಅವಲೋಕಿಸಲಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಪ್ರಧಾನಿ ರಾಜ್ಯಕ್ಕೆ ಕಳುಹಿಸಿದ್ದು

ರಾಷ್ಟ್ರೀಯ ವಿಪತ್ತು ಘೋಷಣೆ ಬಗ್ಗೆ ಇನ್ನು ಎರಡು ಮೂರು ದಿನ ಅವಲೋಕಿಸಿ ಮನವಿಗೆ ಚಿಂತಿಸಲಾಗುವುದು ಎಂದು ಹೇಳಿದರು. ಸಿಆರ್ ಪಿಎಫ್ ನ 3000 ಸಿಬಂದಿ ನೇಮಕ ಪ್ರಕ್ರಿಯೆ ಮುಂದೂಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದರು.

ಇನ್ನೂ ಹಣಕಾಸು ಸಚಿವರು ಆಗಿರುವ ನಿರ್ಮಲಾ ಸೀತಾರಾಮನ್ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರಿಂದ ರಾಜ್ಯಕ್ಕೆ ಹೆಚ್ಚುವರಿ ಪರಿಹಾರ ದೊರೆಯಬಹುದಾ ಎಂಬ ನಿರೀಕ್ಷೆಯಲ್ಲಿದ್ದಾರೆ ರಾಜ್ಯದ ಜನರು.

Recommended For You

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.