‘ಕೇವಲ ಮೂರು ನಾಲ್ಕು ತಿಂಗಳಲ್ಲಿ ರಾಜ್ಯದ ಬದಲಾವಣೆ’ – ಸಿಎಂ ಬಿಎಸ್​ವೈ

ಶಿವಮೊಗ್ಗ: ಕರ್ನಾಟಕ ರಾಜ್ಯದಲ್ಲಿ ನೀರಾವರಿ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಲಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಂಗಳವಾರ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯಕ್ಕೆ ಬಾಗೀನ ಅರ್ಪಿಸಿ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ 1300 ಕೋಟಿ ರೂಪಾಯಿ ವೆಚ್ಚದ ನೀರಾವರಿ ಯೋಜನೆ ರೂಪಿಸಿ ಟೆಂಡರ್ ಕರೆಯಲಾಗಿದೆ, ನೀರಾವರಿ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸಲಾಗುವುದು ಇನ್ನು ಹದಿನೈದು ದಿನದಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಅವರು ತಿಳಿಸಿದರು.

ಶಿವಮೊಗ್ಗ ಜಿಲ್ಲೆ ಹಾಗೂ ಶಿಕಾರಿಪುರ ರಾಜ್ಯಕ್ಕೆ ಮಾದರಿಯಾಗಬೇಕು, ನಮ್ಮ ಜಿಲ್ಲೆ ಪ್ರವಾಸೋದ್ಯಮಕ್ಕೆ ಹೆಸರುವಾಸಿ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು, ಜೋಗ ಜಲಪಾತ ಅಭಿವೃದ್ಧಿಗೆ ಕ್ರಮಕೈಗೊಳ್ಳುತ್ತೇನೆ ಎಂದರು.

ಇನ್ನು ಅರ್ಧಕ್ಕೆ ನಿಂತಿರುವ ವಿಮಾನ ನಿಲ್ದಾಣ ಪೂರ್ಣಗೊಳಿಸುವ ಸಂಬಂಧ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ, ವಿಮಾನ ನಿಲ್ದಾಣ ಕಾಮಗಾರಿಗೆ ಶೀಘ್ರವೇ 50 ಕೋಟಿ ಬಿಡುಗಡೆ ಮಾಡಲಾಗುವುದು, ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯವಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ, ಕೇವಲ ಮೂರು ನಾಲ್ಕು ತಿಂಗಳಲ್ಲಿ ರಾಜ್ಯದ ಜನರು ಬದಲಾವಣೆ ನೋಡಲಿದ್ದಾರೆ ಎಂದು ಸಿಎಂ ಬಿಎಸ್​ವೈ ಅವರು ನುಡಿದರು.

Recommended For You

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.