ಧ್ವಜಾರೋಹಣದ ನಂತರ ದೇಶವನ್ನು ಉದ್ದೇಶಿಸಿ ಮೋದಿ ಭಾಷಣ

ನವದೆಹಲಿ: ದೇಶವು ಇಂದು 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ, ಸಡಗರದಿಂದ ಆಚರಿಸುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿದರು.

ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಸತತ ಆರನೇ ಬಾರಿಗೆ ಕೆಂಪುಕೋಟೆಯಲ್ಲಿ ರಾಷ್ಟ್ರೀಯ ಧ್ವಜಾರೋಹಣ ಮಾಡಿದ್ದು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹಿಂದಿನ ದಾಖಲೆಯನ್ನು ಸರಿಗಟ್ಟಿದ್ದಾರೆ.

ಬೆಳಗ್ಗೆ ಏಳು ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಿದರು. ಬಳಿಕ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು.

ಮೋದಿ ಎರಡನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ, ಒಟ್ಟು ಆರನೇ ಬಾರಿ ದಿಲ್ಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡುತ್ತಿದ್ದಾರೆ. ಹೀಗಾಗಿ ದೇಶದ ಜನ ಸಾಮಾನ್ಯರಲ್ಲಿ ಸಾಕಷ್ಟು ನಿರೀಕ್ಷೆಗಳು ಮೂಡಿದೆ. ಈ ಬಾರಿ ದೇಶವಾಸಿಗಳಿಗೆ ಮೋದಿ ಯಾವ ರೀತಿಯ ಭರಪೂರ ಕೊಡುಗೆಗಳನ್ನು ಕೊಡ್ತಾರೆ ಅನ್ನೋ ಕುತೂಹಲದಲ್ಲಿ ಜನರಿದ್ದರು.

ಇನ್ನೂ ಬೆಂಗಳೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ತಡರಾತ್ರಿಯೇ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಹಿಂದೂ ಜಾಗರಣ ವೇದಿಕೆಯಿಂದ ಕಾರ್ಯಕ್ರಮ ಆಯೋಜನೆ ಮಾಡಿದ್ದು, 12 ಗಂಟೆಗೆ ಸರಿಯಾಗಿ ಧ್ವಜಾರೋಹಣ ಮಾಡಿದರು. ಸರ್ದಾರ್ ಮಣೀಂದ್ರ ಸಿಂಗ್ ಬಿಟ್ಟಾ ರಿಂದ ಧ್ವಜಾರೋಹಣ ಮಾಡಲಾಯಿತು. ನೂರಾರು ಸಂಖ್ಯೆಯಲ್ಲಿ ಜನ ಸಾಮಾನ್ಯರು ಭಾಗಿಯಾಗಿದ್ದು,  ರಾಷ್ಟ್ರ ಧ್ವಜ ಹಾಗೂ ಹಿಂದೂ ಜಾಗರಣ ಬಾವುಟ ಹಿಡಿದು  ಜನರು ನಿಂತಿದ್ದರು.

ಇನ್ನು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಚಿವ ಸಂಪುಟ ರಚನೆಯಾಗದ ಕಾರಣ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಲಿದ್ದಾರೆ.

ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಬೆಳಗ್ಗೆ 8.58ಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಿ 9 ಗಂಟೆಗೆ ಧ್ವಜಾರೋಹಣ ನೆರವೇರಿಸುತ್ತಾರೆ.

ಪರೇಡ್‍ನಲ್ಲಿ ಗೋವಾ ಪೊಲೀಸ್, ಬಿಎಸ್‍ಎಟಫ್, ಸಿಆರ್ ಪಿಎಫ್, ಕೆಸ್‍ ಆರ್ ಪಿ ಭಾಗಿಯಾಗುತ್ತದೆ. ಭದ್ರತೆಗಾಗಿ 1906 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮೈದಾನದ ಸುತ್ತ 50 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. 4 ಬ್ಯಾಗೇಜ್ ಸ್ಕ್ಯಾನರ್, ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆ ಮಾಡಲಾಗಿದೆ.

 

Recommended For You

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.