ಪ್ರತಿಯೊಬ್ಬ ಕನ್ನಡಿಗ ನೆಮ್ಮದಿ, ಸ್ವಾಭಿಮಾನದಿಂದ ಬದುಕುವಂತಾಗಬೇಕು’- ಯಡಿಯೂರಪ್ಪ

ಬೆಂಗಳೂರು:  ಜನರ ಹಿತಕ್ಕಾಗಿ, ಸಮೃದ್ದಿ ಶಾಂತಿಗಾಗಿ ಸರ್ಕಾರ ಶ್ರಮಿಸಲಿದೆ ಎಂದು ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಹೇಳಿದ್ದಾರೆ.

ನಗರ ಪ್ರದೇಶಗಳಿಗೆ ಬರುವವರ ಸಂಖ್ಯೆ ಹೆಚ್ಚಾಗಿದೆ

ಬೆಂಗಳೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು,  ನಗರೀಕರಣ ವ್ಯಾಪಕವಾಗಿದೆ.  ನಗರ ಪ್ರದೇಶಗಳಿಗೆ ಬರುವವರ ಸಂಖ್ಯೆ ಹೆಚ್ಚಾಗಿದೆ.  ನಗರ ಪ್ರದೇಶಗಳ ವಿಸ್ತರಣೆ ನಿಲ್ಲಿಸಬೇಕಿದೆ ಎಂದು ಹೇಳಿದರು.

ಪ್ರವಾಸೋದ್ಯಮದ ಅಭಿವೃದ್ಧಿ ನಮ್ಮ ಗುರಿ

ನಂತರ ಉದ್ಯೋಗ ಸೃಷ್ಟಿ, ಕೌಶಲ್ಯಾಭಿವೃದ್ದಿಗೆ ಮೊದಲ  ಆದ್ಯತೆ ನೀಡಲಾಗುವುದು. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು ಎಂದರು. ಸಾವಿರಾರು ವರ್ಷಗಳ ಇತಿಹಾಸ ,ಪರಂಪರೆ ಹೊಂದಿರುವ ತಾಣಗಳ ರಕ್ಷಣೆಗೆ ಆದ್ಯತೆ ನೀಡಿದ್ದೇವೆ.  ಈಗಾಗಲೇ ಇನ್ಫೊಸಿಸ್ ಸುಧಾಮೂರ್ತಿಯವರ ನೇತೃತ್ವದಲ್ಲಿ ಪ್ರವಾಸೋದ್ಯಮ ಕಾರ್ಯಪಡೆ ರಚಿಸಿದ್ದೇವೆ.  ಸುಸ್ಥಿರ  ಪ್ರವಾಸೋದ್ಯಮದ ಅಭಿವೃದ್ಧಿ ನಮ್ಮ ಗುರಿ ಎಂದು  ಸಿಎಂ ಯಡಿಯೂರಪ್ಪ ತಿಳಿಸಿದರು.

ಕೇಂದ್ರ ಸರಕಾರ ದಿಟ್ಟ ನಿರ್ಧಾರ ಕೈಗೊಂಡಿದೆ

ರೈತರ ಅಭಿವೃದ್ಧಿಗೆ ರಾಜ್ಯ ಸರಕಾರ ಬದ್ಧ ಎಂದು ಹೇಳಿದರು. ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ 370 ರದ್ದು ಸ್ವಾಗತಿಸಿದ ಸಿಎಂ, ಕಾಶ್ಮೀರ ವಿಷಯದಲ್ಲಿ ಕೇಂದ್ರ ಸರಕಾರ ದಿಟ್ಟ ನಿರ್ಧಾರ ಕೈಗೊಂಡಿದೆ ಎಂದು ಯಡಿಯೂರಪ್ಪ ಶ್ಲಾಘೀಸಿದರು.

‘ಕಾಯಕವೇ ಕೈಲಾಸ ಎಂಬ ನುಡಿಯಂತೆ ನಡೆದು ನನಗೆ ದೊರೆತ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಸಮೃದ್ಧ ಕರ್ನಾಟಕ ನಿರ್ಮಿಸುವ ಕನಸು ನನ್ನದು. ಪ್ರತಿಯೊಬ್ಬ ಕನ್ನಡಿಗ ನೆಮ್ಮದಿ, ಸ್ವಾಭಿಮಾನದಿಂದ ಬದುಕುವಂತಾಗಬೇಕು’ ಎನ್ನುವುದು ನನ್ನ ಆಶಯ ಎಂದು ಯಡಿಯೂರಪ್ಪ ಹೇಳಿದರು.

ಸಂತ್ರಸ್ಥರ ರಕ್ಷಣೆಗೆ ನಿಲ್ಲೋಣ

ಪ್ರವಾಹದಿಂದ ನಾಡು ತತ್ತರಿಸಿದೆ.  ನಾವು ನೀವು ಸೇರಿ ಸಂತ್ರಸ್ಥರ ರಕ್ಷಣೆಗೆ ನಿಲ್ಲೋಣ ಎಂದು ಯಡಿಯೂರಪ್ಪ ಇದೇ ವೇಳೆ ಮನವಿ ಮಾಡಿದರು.

Recommended For You

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.