ಸಿದ್ದರಾಮಯ್ಯ ಹೇಳಿಕೆಯಿಂದ ಮಾಜಿ ಸಿಎಂ ಕುಮಾರಸ್ವಾಮಿ ಸಂಕಷ್ಟ..!

ಬೆಂಗಳೂರು: ಮೈತ್ರಿ ಸರ್ಕಾರದ ವೇಳೆ ನಡೆದಿದೆ ಎನ್ನಲಾದ ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನು ತನಿಖೆಗೆ ವಹಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿಂದು ಪ್ರತಿಕ್ರಿಯೆ ನೀಡಿರುವ ಅವರು, ಮೈತ್ರಿ ಸರ್ಕಾರದಲ್ಲಿ ಆ ರೀತಿ ಆಗಿದೆ ಅನ್ನೋದು ಗೊತ್ತಿಲ್ಲ. ಒಂದು ವೇಳೆ ಆಗಿದ್ದರೆ ತನಿಖೆ ನಡೆಯಲಿ,ತಪ್ಪಿತಸ್ಥರು ಯಾರೇ ಆಗಿದ್ರೂ ಕ್ರಮತೆಗೆದುಕೊಳ್ಳಲಿ ಅಂತ ಹೇಳಿದ್ದಾರೆ.

ಈ ಮೂಲಕ ತಮ್ಮದೇ ಪಕ್ಷದ ಮೈತ್ರಿ ಸರ್ಕಾರದ ವೇಳೆ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಪುಷ್ಠಿ ನೀಡಿದ್ದಾರೆ. ಸರ್ಕಾರ ಉಳಿಸಿಕೊಳ್ಳಲು ಮಾಜಿ ಸಿಎಂ ಕುಮಾರಸ್ವಾಮಿ ಸಿದ್ದರಾಮಯ್ಯ ಸೇರಿದಂತೆ ಬಿಜೆಪಿ ನಾಯಕರ ಫೋನ್​ ಕದ್ದಾಲಿಕೆ ಮಾಡಿಸಿದ್ದರು ಎನ್ನಲಾಗ್ತಿದೆ. ಹೀಗಾಗಿ ಸಿದ್ದರಾಮಯ್ಯನವರ ಹೇಳಿಕೆ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಮತ್ತಷ್ಟು ಸಂಕಷ್ಟ ತಂದಿಟ್ಟಿದೆ.

ಇದೇ ವೇಳೆ  ಕೆಪಿಸಿಸಿ ಕಚೇರಿಯಲ್ಲಿಂದು 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯ್ತು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಧ್ವಜಾರೋಹಣವನ್ನು ನೆರವೇರಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ,ವೀರಪ್ಪಮೊಯ್ಲಿ,ಮಾಜಿ ಸಚಿವ ಹೆಚ್.ಆಂಜನೇಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದರು. ಇದೇ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಹಲವು ಗಣ್ಯರ ಪ್ರಾಣತ್ಯಾಗದಿಂದ ದೇಶ ಸ್ವತಂತ್ರವನ್ನು ಪಡೆದಿದೆ ಎಂದರು.

ಆದರೆ ಇವತ್ತು ಭಯದ ವಾತಾವರಣ ನಿರ್ಮಾಣವಾಗದೆ ಅಂತ ಬಿಜೆಪಿ ನಾಯಕರ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಭಾವನಾತ್ಮಕ,ಸುಳ್ಳುಗಳ ರಾಜಕೀಯವನ್ನು ಮಾಡುತ್ತಿದೆ, ಜನರ ಟೀಕೆ ಟಿಪ್ಪಣಿಗಳನ್ನೇ ಹತ್ತಿಕ್ಕುವಂತ ಕೆಲಸ ಮಾಡ್ತಿದೆ ಅಂತ ಆರೋಪಿಸಿದರು.

ದೇಶ ಗಂಭೀರ ಪರಿಸ್ಥಿತಿಯಲ್ಲಿದ್ದು, ಪ್ರಜಾಪ್ರಭುತ್ವವನ್ನು ಉಳಿಸುವ ಕೆಲಸ ಮಾಡಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇನ್ನು ದೇಶದ ಐಕ್ಯತೆ, ಸಾಮಾಜಿಕತೆ,ಪ್ರಜಾಪ್ರಭುತ್ವವನ್ನು ಉಳಿಸುವ ಕೆಲಸ ಮಾಡಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ ಜನರಿಗೆ ಕರೆ ನೀಡಿದರು.

Recommended For You

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.