ಅಣ್ಣನಿಗೆ ರಾಖಿ ಕಟ್ಟುವ ಶುಭ ಸಮಯ ಯಾವುದು ಗೊತ್ತಾ..?

ರಕ್ಷಾಬಂಧನದಲ್ಲಿ ಎರಡು ಪದಗಳಿವೆ. ಅದೇ ರಕ್ಷಾ ಮತ್ತು ಬಂಧನ. ರಕ್ಷಾ ಎಂದರೆ ರಕ್ಷಣೆ ಮತ್ತು ಬಂಧನ ಎಂದರೆ ಬಂಧವೆಂದರ್ಥ. ಸೋದರ ಮತ್ತು ಸೋದರಿ ತಮ್ಮೊಳಗೆ ಹಂಚಿಕೊಳ್ಳುವ ಯಾವತ್ತೂ ಕೊನೆಗೊಳ್ಳದ ಪ್ರೀತಿಯನ್ನು ರಕ್ಷಾಬಂಧನವೆನ್ನಬಹುದು ಹೇಳಲಾಗುತ್ತಾದೆ.

ಅಣ್ಣ ತಂಗಿಯ ಜೀವನದ ಪ್ರೀತಿಯ ಒಂದು ಉತ್ತಮ ಕಾರ್ಯ  ಸಂಕೇತ ಈ ರಕ್ಷಾ ಬಂಧನ, ಒಬ್ಬರನ್ನು ಪರಸ್ಪರ ರಕ್ಷಣೆ ಮಾಡುವ ಮನಸ್ತಾಪವನ್ನು ಹೊಂದಿರುತ್ತಾರೆ. ರಕ್ಷಾ ಬಂಧನ ಪ್ರಾಚೀನ ಕಾಲದಿಂದ ಬಹಳ ಪ್ರಾಮುಖ್ಯತೆ ಹೊಂದಿದೆ.

ಈ ಸಮಯದಲ್ಲಿ ರಾಖಿ ಕಟ್ಟಬೇಕು

ಬೆಳಗ್ಗೆ 7.45ರಿಂದ ಮಧ್ಯಾಹ್ನ 12. 28ರ ವರೆಗಿನ ಸಮಯವು ಅಣ್ಣನಿಗೆ ರಾಖಿ ಕಟ್ಟಲು ತುಂಬಾ ಶುಭ ಸಮಯವೆಂದು ಪರಿಗಣಿಸಲಾಗಿದೆ. ಮಧ್ಯಾಹ್ನ 2.03ರಿಂದ 3.38ರ ವರೆಗಿನ ಸಮಯ ಕೂಡ ಶುಭವಾಗಿದೆ. ರಾತ್ರಿ ಸಮಯದಲ್ಲಿ ರಾಖಿಯನ್ನು ಕಟ್ಟುವುದು ಅಷ್ಟೋಂದು ಶುಭವಲ್ಲ

ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ

ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಹಬ್ಬ. ಆ ದಿನ ಸಹೋದರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟ ಗೊಳಿಸುವ ಹಬ್ಬ ಇದಾಗಿದೆ.

ಸಹೋದರನ ಮುಂಗೈಗೆ ರಾಖಿ ಕಟ್ಟಬೇಕು

ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನ ಹಬ್ಬದ ನೀತಿಯಾಗಿದೆ.

Recommended For You

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.