ಗಡಿಪಾರು ಮಾಡ್ತೀನಿ ರವಿ.ಡಿ. ಚನ್ನಣ್ಣನವರ್ ಖಡಕ್ ವಾರ್ನಿಂಗ್

ನೆಲಮಂಗಲ:  ಬಾಲ ಬಿಚ್ಚಿದರೆ ಗಡಿಪಾರು ಕಟ್ಟಿಟ್ಟ ಬುತ್ತಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಎಸ್​ಪಿ ರವಿ. ಡಿ ಚನ್ನಣ್ಣನವರ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ನೆಲಮಂಗಲದಲ್ಲಿ ಶುಕ್ರವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಯಾವುದೇ ರೌಡಿ ಚಟುವಟಿಕೆಗಳಲ್ಲಿ ಪದೇ ಪದೇ ಭಾಗಿಯಾದರೆ ಗಡಿಪಾರು ಮಾಡುವುದಾಗಿ ಎಸ್​​ಪಿ ರವಿ. ಡಿ ಚನ್ನಣ್ಣನವರ್ ಎಚ್ಚರಿಕೆ ಕೊಟ್ಟಿದ್ದಾರೆ.

ನನ್ನ ಮಾತು ಕೇಳಿದರೆ ಸರಿ, ಇಲ್ಲಾ ಅಂದರೆ ಗೂಂಡಾ ಕಾಯ್ದೆ ಅಡಿಯಲ್ಲಿ, ಗಡಿಪಾರಿನಂತಹ ಕಠಿಣ ಕ್ರಮ ಹಾಗೂ ಗಾಂಜಾ, ಮಾದಕ ವ್ಯಸನೆಯ ಜಾಲದ ಬಗ್ಗೆಯೂ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ ಅವರು ಈ ಮೂಲಕ ಜಿಲ್ಲೆಯ ರೌಡಿ ಶೀಟರ್​ಗಳ ಎದೆಯಲ್ಲಿ ನಡುಕ ಹುಟ್ಟಿಸುವಂತೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಹೇಳಿದರು.

ಜನಸಂಪರ್ಕ ಸಭೆಯಲ್ಲಿ ಸಾಕಷ್ಟು ದೂರುಗಳು ಬಂದಿವೆ,  ಪರಿಶೀಲನೆ ಮಾಡಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಇದೇ ವೇಳೆ ತಿಳಿಸಿದರು. ಇನ್ನೂ  ಕಾನೂನು ಸುವ್ಯವಸ್ಥೆಗೆ ಜಿಲ್ಲೆಯ ಜನತೆ ಸಹಕಾರ ನೀಡಬೇಕು ಎಂದು ಈ ಸಂದರ್ಭದಲ್ಲಿ ಎಸ್ ಪಿ ರವಿ ಡಿ ಚನ್ನಣ್ಣನವರ್ ಜನತೆಯಲ್ಲಿ ಮನವಿ ಮಾಡಿದರು.

Recommended For You

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.