14 ಜಿಲ್ಲೆಗಳಲ್ಲಿ ರೆಡ್ ಅಲರ್ಟ್‌ ವಾಪಸ್ -ಹವಾಮಾನ ಇಲಾಖೆ ಹೇಳಿದ್ದೇನು..?

ಕೇರಳ: ಮಳೆ ಹಾಗೂ ಪ್ರವಾಹದಿಂದ ತತ್ತರಿಸಿದ್ದ ಕೇರಳಲ್ಲಿ ಬಿಸಿಲು ಕಾಣಿಸಿಕೊಂಡಿದ್ದು, ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕಡಿಮೆಯಾಗಿದೆ.

ಇನ್ನೂ ಸಂತ್ರಸ್ತರು ಪರಿಹಾರ ಶಿಬಿರಗಳಿಂದ ತಮ್ಮ ಮನೆಗಳಿಗೆ ವಾಪಸಾಗುತ್ತಿದ್ದಾರೆ. ಮಳೆ ಸಂಬಂಧಿ ಅವಘಡಗಳಿಂದ ಮೃತಪಟ್ಟವರ ಸಂಖ್ಯೆ 104ಕ್ಕೆ ಏರಿಕೆಯಾಗಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ.

ರೆಡ್ ಅಲರ್ಟ್‌ ವಾಪಸ್

ಮಳೆ ಪ್ರಮಾಣ ಕಡಿಮೆಯಾಗಿದ್ದು, 14 ಜಿಲ್ಲೆಗಳಲ್ಲಿ ರೆಡ್ ಅಲರ್ಟ್‌ ವಾಪಸ್ ಪಡೆಯಲಾಗಿದೆ. ಆದರೆ, ಕಣ್ಣೂರು, ಕಾಸರಗೋಡು, ಇಡುಕ್ಕಿ ಜಿಲ್ಲೆಯಲ್ಲಿ ನಾಳೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕವಳಪ್ಪಾರ ಹಾಗೂ ಪುತ್ತಮಲದಲ್ಲಿ ನಾಪತ್ತೆಯಾದವರ ಶೋಧ ಕಾರ್ಯ ಮುಂದುವರಿದಿದೆ. ಡ್ರೋನ್, ಶ್ವಾನದಳ ಹಾಗೂ ಆಧುನಿಕ ಉಪಕರಣ ಬಳಸಲಾಗಿದೆ. ಪ್ರವಾಹ ಸಂತ್ರಸ್ತರು ನಿಧಾನವಾಗಿ ತಮ್ಮ ಮನೆಗಳಿಗೆ ತೆರಳುತ್ತಿದ್ದಾರೆ. 1057 ಪರಿಹಾರ ಕೇಂದ್ರಗಳಲ್ಲಿ 1 ಲಕ್ಷದ 75 ಸಾವಿರ ಮಂದಿ ಆಶ್ರಯ ಪಡೆದಿದ್ದಾರೆ.

Recommended For You

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.