ನನ್ನ ಇಮೇಜ್ ಡ್ಯಾಮೇಜ್ ಮಾಡಲು ಸಾಧ್ಯವಿಲ್ಲ – ಕುಮಾರಸ್ವಾಮಿ

ಬೆಂಗಳೂರು: ಭಾರಿ ಚರ್ಚೆಗೆ ಗ್ರಾಸವಾಗಿರುವ ಟೆಲಿಫೋನ್ ಕದ್ದಾಲಿಕೆ ಪ್ರಕರಣಕ್ಕೇ ಹೊಸ ತಿರುವು ಸಿಕ್ಕಿದೆ. ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ಮುಖ್ಯಮಂತ್ರಿ ಯಡಿಯೂರಪ್ಪ ವಹಿಸಿದ್ದಾರೆ.

ಇತ್ತೀಚಿಗೆ ರಾಜ್ಯ ರಾಜಕೀಯದಲ್ಲಿ ಫೋನ್ ಕದ್ದಾಲಿಕೆಯದ್ದೇ ಸದ್ದು. ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಟೆಲಿಪೋನ್ ಕದ್ದಾಲಿಕೆ ಆರೋಪ ಕೇಳಿಬಂದಿತ್ತು. ಡಿಜಿ- ಐಜಿಪಿ ವರದಿಯಲ್ಲೂ ಫೋನ್ ಟ್ಯಾಪಿಂಗ್ ವಿವರ ಬಹಿರಂಗಗೊಂಡಿತ್ತು. ಅಲ್ಲದೇ ರಾಜಕೀಯ ಮುಖಂಡರು, IAS, IPS, ಸೇರಿದಂತೆ ಸುಮಾರು 180ಕ್ಕೂ ಹೆಚ್ಚಿನ ಜನರ ದೂರವಾಣಿಗಳನ್ನು ಕದ್ದಾಲಿಕೆ ಮಾಡಿರೋದು ಬೆಳಕಿಗೆ ಬಂದಿದೆ ಎನ್ನಲಾಗಿದೆ.

ತೀವ್ರ ಕೋಲಾಹಲಕ್ಕೆ ಕಾರಣವಾಗಿದ್ದ ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನು ಇದೀಗ ಸಿಬಿಐ ತನಿಖೆಗೆ ವಹಿಸಲಾಗಿದೆ. ಬಿಎಸ್‌ವೈ ನಡೆಯಿಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಮೈತ್ರಿ ಸರ್ಕಾರದ ಇನ್ನೂ ಹಲವು ಪ್ರಭಾವಿಗಳು ಕಾನೂನಿನ ಮುಷ್ಟಿಗೆ ಸಿಲುಕುವ ಸಾಧ್ಯತೆಗಳೇ ಹೆಚ್ಚಾಗಿದೆ.

ನಿನ್ನೆ ಫೋನ್ ಕದ್ದಾಲಿಕೆ ಬಗ್ಗೆ ಯಡಿಯೂರಪ್ಪ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚರ್ಚಿಸಿದ್ದರು. ಯಾವ ತನಿಖೆ ಅಂತ ನಾವು ನಿರ್ಧಾರ ಮಾಡಿ, ಬೆಳಗ್ಗೆ ಹೇಳ್ತೀವಿ ಅಂತ ತಿಳಿಸಿದ್ದರು. ಹೀಗಾಗಿ ಇಂದು ಬೆಳಗ್ಗೆ 7 ಗಂಟೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ, ಯಡಿಯೂರಪ್ಪಗೆ ಕರೆ ಮಾಡಿ ಸಿಬಿಐ ತನಿಖೆಗೆ ಸೂಚಿಸಿದ್ದಾರೆ. ಅದ್ರಂತೆ ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐಗೆ ವಹಿಸಿ ಸಿಎಂ ಬಿಎಸ್‌ವೈ ಆದೇಶಿಸಿದ್ದಾರೆ.

ಸಿಬಿಐ ಹೆಗಲಿಗೆ ಟೆಲಿಫೋನ್ ಕದ್ದಾಲಿಕೆ ಕೇಸ್ ವಿಚಾರವಾಗಿ ಪ್ರತಿಕ್ರಿಯೆ ನೀಡಿರೋ ಮಾಜಿ ಸಿಎಂ ಹೆಚ್‌ಡಿಕೆ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾತನಾಡಿದ ಅವರ, ಸಿಬಿಐ ಅಲ್ಲ, ಟ್ರಂಪ್ ಸಲಹೆ ಪಡೆದು ತನಿಖೆ ಮಾಡಲಿ ಅಂತಂದರು. ಅಲ್ಲದೇ ಯಾರೇ ಬಂದರೂ ಕುಮಾರಸ್ವಾಮಿ ಇಮೇಜ್ ಡ್ಯಾಮೇಜ್ ಮಾಡಲು ಸಾಧ್ಯವಿಲ್ಲ ಎಂದು ಟಾಂಗ್ ನೀಡಿದರು.

ಇನ್ನು ಫೋನ್ ಟ್ಯಾಪಿಂಗ್ ಪ್ರಕರಣವನ್ನು ಸಿಬಿಐಗೆ ವಹಿಸಿರುವ ಕುರಿತು ಬಿಜೆಪಿಗೆ ಟ್ವಿಟರ್‌ನಲ್ಲೇ ಕಾಂಗ್ರೆಸ್‌ನ ಟಗರು ಸಿದ್ದರಾಮಯ್ಯ ಗುದ್ದು ನೀಡಿದ್ದಾರೆ.

ಸರಣಿ ಟ್ವೀಟ್ ಮಾಡಿರೋ ಮಾಜಿ ಸಿಎಂ ಸಿದ್ದರಾಮಯ್ಯ, ಆಪರೇಷನ್ ಕಮಲದಲ್ಲೂ ಕೋಟ್ಯಂತರ ಅವ್ಯವಹಾರ ನಡೆದಿರೋ ಆರೋಪ ಇದೆ, ಅದರ ಬಗ್ಗೆಯೂ ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿದರು.

Recommended For You

About the Author: Dayakar

Leave a Reply

Your email address will not be published. Required fields are marked *