ಮಾಜಿ ಸಿಎಂ ಕುಮಾರಸ್ವಾಮಿ ಹಾದಿಯಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ..!

ಬೆಂಗಳೂರು: ಸಿಎಂ ಯಡಿಯೂರಪ್ಪ ಕೂಡ ಮಾಜಿ ಸಿಎಂ ಕುಮಾರಸ್ವಾಮಿ ಹಾದಿಯಲ್ಲೇ ಸಾಗ್ತಿದ್ದಾರೆ. ಸೀಟು ಗಟ್ಟಿಯಾಗಿರ್ಲಿ ಅಂತ ಕೊಪ್ಪದ ಗೌರಿಗದ್ದೆ ಆಶ್ರಮದಲ್ಲಿ ಶತರುದ್ರಯಾಗ ನಡೆಸಿದ್ದಾರೆ. ಆರು ದಿನಗಳಿಂದ ನಡೆಯುತ್ತಿದ್ದ ಹೋಮದ ಪೂರ್ಣಾಹುತಿಯಲ್ಲಿ ಭಾಗಿಯಾಗಿ, ಮುಂದಿನ ಮೂರುವರೆ ವರ್ಷ ತಾವೇ ಸಿಎಂ ಆಗಿ ಇರಲೆಂದು ಬೇಡಿಕೊಂಡಿದ್ದಾರೆ.

ಇಂದು ಶೃಂಗೇರಿಗೆ ಆಗಮಸಿದ್ದ ಬಿಎಸ್‌ವೈ, ಮಳೆ ಕಡಿಮೆಯಾಗ್ಲಿ ಎಂದು ಶಾರದಾಂಬೆಗೆ ಪೂಜೆ ಮಾಡ್ತಿದ್ದೇವೆ ಅಂತ ಹೇಳಿದರು. ಆದರೆ, ಗೌರಿಗದ್ದೆ ಆಶ್ರಮದಲ್ಲಿ ಅಧಿಕಾರದ ಶಾಶ್ವತಕ್ಕಾಗಿ ಹಿಂದೆ ರಾಜ ಮಹರಾಜರು ಮಾಡ್ತಿದ್ದ ಶತರುದ್ರಯಾಗದಲ್ಲಿ ಪಾಲ್ಗೊಂಡಿದರು. ಆರು ದಿನಗಳಿಂದ ನಡೆಯುತ್ತಿದ್ದ ಯಾಗದ ಪೂರ್ಣಾಹುತಿಯಲ್ಲಿ ಭಾಗಿಯಾಗಿ, ಎರಡು ಗಂಟೆಗೂ ಹೆಚ್ಚು ಕಾಲ ಹೋಮದಲ್ಲಿ ಪಾಲ್ಗೊಂಡಿದರು.

ಬೆಳಗ್ಗೆ 10.30ಕ್ಕೆ ಶೃಂಗೇರಿಗೆ ಬಂದಿಳಿದ ಸಿಎಂ, ಶೃಂಗೇರಿಗೆ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ಭಾರತೀ ತೀರ್ಥ ಸ್ವಾಮೀಜಿ ಹಾಗೂ ವಿಧುಶೇಖರ ಸ್ವಾಮೀಜಿಯ ಆಶೀರ್ವಾದ ಪಡೆದರು. ಬಳಿಕ ಗೌರಿಗದ್ದೆಯ ಸ್ವರ್ಣ ಪೀಠಿಕೇಶ್ವರಿ ದತ್ತಾಶ್ರಮದ ಹೋಮದಲ್ಲಿ ಪಾಲ್ಗೊಂಡರು. ಹೋಮದಲ್ಲಿ ಬಿಎಸ್‌ವೈ ಜೊತೆ ಸಂಸದೆ ಶೋಭಾ ಕರಂದ್ಲಾಜೆ ಕೂಡ ಪೂರ್ಣ ಪ್ರಮಾಣದ್ಲಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.

ಕಳೆದ ಬಾರಿ ಚಿಕ್ಕಮಗಳೂರಿಗೆ ಆಗಮಿಸಿದ್ದ ಬಿಎಸ್‌ವೈ, ಪ್ರವಾಹ ಪೀಡಿತ ಪ್ರದೇಶ ಮೂಡಿಗೆರೆ ತಾಲೂಕಿನ ಮಲೆಮನೆಗೆ ಕೇವಲ ಹತ್ತು ನಿಮಿಷ ಭೇಟಿ ಕೊಟ್ಟು ಹಿಂದಿರುಗಿದರು. ಆದರೆ ಇವತ್ತು ತುಂಬಾ ಪುರುಸೋತ್ತಾಗಿದ್ದ ಸಿಎಂ, ವಿನಯ್ ಗುರೂಜಿ ಆಶ್ರಮದಲ್ಲಿ ಬರೋಬ್ಬರಿ ಎರಡು ಗಂಟೆಗಳ ಕಾಲ ಹೋಮ ಹವನದಲ್ಲಿ ಭಾಗಿಯಾಗಿದರು. ಅಲ್ಲದೇ ಶತರುದ್ರಯಾಗದ ಪೂರ್ಣಹುತಿಯಲ್ಲಿ ಭಾಗಿಯಾಗಿ, ಹರಕೆ ತೀರಿಸಿದ್ದಾರೆ.

Recommended For You

About the Author: TV5 Kannada

Leave a Reply

Your email address will not be published. Required fields are marked *