ಕುಮಾರಸ್ವಾಮಿ ಕನಸಿಗೆ ಸಿಎಂ ಬಿ.ಎಸ್​ ಯಡಿಯೂರಪ್ಪ ಕೊಟ್ರು ಶಾಕ್​!

ಬೆಂಗಳೂರು: ಜೀವ ವೈವಿಧ್ಯ ತಾಣ ರೋರಿಚ್ ಎಸ್ಟೇಟಿನಲ್ಲಿ ಫಿಲ್ಮ್​ ಸಿಟಿ ನಿರ್ಮಿಸುವುದು ಮಾನ್ಯ ಬಿ.ಎಸ್ ಯಡಿಯೂರಪ್ಪ ಅವರ ದ್ವೇಷ-ನಾಶ ರಾಜಕಾರಣದ ಪ್ರತೀಕ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಟ್ವಿಟ್ ಮಾಡಿ ವ್ಯಂಗ್ಯವಾಡಿದ್ದಾರೆ.

ಫಿಲ್ಮ್ ಸಿಟಿಯನ್ನು ರಾಮನಗರದಲ್ಲಿ ಕಟ್ಟಬೇಕೆಂದು ನನ್ನ ಸರ್ಕಾರದಲ್ಲಿ ತೀರ್ಮಾನಿಸಲಾಗಿತ್ತು. ಈ ಮೂಲಕ ರಾಮನಗರ, ಬೆಂಗಳೂರು, ಬೆಂ.ಗ್ರಾಮಾಂತರ ಜಿಲ್ಲೆಯ ಯುವಕರಿಗೆ ಉದ್ಯೋಗ ಸೃಷ್ಟಿಸುವುದು ಈ ಯೋಜನೆಯ ಉದ್ದೇಶವಾಗಿತ್ತು.
ಆದರೆ, ಇತ್ತೀಚಿಗೆ ಈ ಫಿಲ್ಮ್ ಸಿಟಿಯನ್ನು ಸ್ಥಳಾಂತರಿಸುವ ನಿರ್ಧಾರದ ಮಾಡುವ ಮೂಲಕ ಮುಖ್ಯಮಂತ್ರಿ ಅವರು ರಾಮನಗರದ ವಿಚಾರದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಟ್ವೀಟ್​ನಲ್ಲಿ ಪ್ರಕಟಿಸಿದ್ದಾರೆ.

https://platform.twitter.com/widgets.js

https://platform.twitter.com/widgets.js

https://platform.twitter.com/widgets.js
ಬೆಂಗಳೂರು ಹೊರವಲಯದಲ್ಲಿ ಅತಿಕ್ರಮಣಕ್ಕೆ ತುತ್ತಾಗದೇ ಜೀವ ವೈವಿಧ್ಯ ಉಳಿಸಿಕೊಂಡಿರುವ ತಾಣ ರೋರಿಚ್ ಎಸ್ಟೇಟ್, ಇದು ಫಿಲ್ಮ್ ಸಿಟಿಗೆ ಸೂಕ್ತವಾದ ಜಾಗವಲ್ಲ. ಹಾಗೇನಾದರೂ ಇಲ್ಲಿ ಫಿಲ್ಮ್​ ಸಿಟಿ ಕಟ್ಟಿದರೆ ಪರಿಸರ ನಾಶದ ಜೊತೆಗೆ ಮಾನವ-ವನ್ಯ ಮೃಗಗಳ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತೆ ಆಗುತ್ತದೆ ಎಂದು ಟ್ವಿಟ್ ಮಾಡಿದ್ದಾರೆ.

ಮೈತ್ರಿ ಸರ್ಕಾರ ಆಡಳಿತ ನಡೆಸುವಾಗ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಈ ಫಿಲ್ಮ್ ಸಿಟಿಯನ್ನು ರಾಮನಗರದಲ್ಲಿ ನಿರ್ಮಾಣ ಮಾಡಲು ಮುಂದಾಗಿದ್ದರು. ಮೈತ್ರಿ ಸರ್ಕಾರ ಪತನಗೊಂಡಿದ್ದರಿಂದ ಈ ಫಿಲ್ಮ್ ಸಿಟಿಯ ನಿರ್ಮಾಣದ ಕೆಲಸ ನಿಂತಿತ್ತು. ಆದರೆ, ಈಗ ಬಿಜೆಪಿ ಸರ್ಕಾರ ರಚೆನೆಯಾಗಿದ್ದು ಅಲ್ಲಿಂದ ಮತ್ತೆ ಬೇರೆ ಕಡೆ ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿದೆ.

Recommended For You

About the Author: TV5 Kannada

Leave a Reply

Your email address will not be published. Required fields are marked *