‘ನನ್ನನ್ನು ನಿಂಬೆಹಣ್ಣು ರೇವಣ್ಣ ಎಂದು ಗೇಲಿ ಮಾಡುತ್ತಿದ್ದ ಬಿಜೆಪಿ ನಾಯಕರೇ ಈಗೇನು ಹೇಳುತ್ತೀರಿ..?’

ಹಾಸನ: ಹಾಸನದ ಹೊಳೆನರಸೀಪುರದ ಚಾಕೇನಹಳ್ಳಿಯಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಕಾವೇರಿ ಕೊಳ್ಳದಲ್ಲಿ ಇರುವ ಡ್ಯಾಂಗಳಲ್ಲಿ ಆಗಬೇಕಾದ ಕೆಲಸಗಳಿಗೆ ಮುಖ್ಯಮಂತ್ರಿ ತಡೆಹಿಡಿದಿದ್ದಾರೆ. ಮೈಸೂರು, ಮಂಡ್ಯ, ಮಡಿಕೇರಿ ಸೇರಿದಂತೆ ಈ ಕಾಮಗಾರಿಗಳು ನಡೆಯಬೇಕಿತ್ತು. ಜೆಡಿಎಸ್, ಕಾಂಗ್ರೆಸ್ ಪ್ರಾಬಲ್ಯ ಇರುವ ಕ್ಷೇತ್ರದ ಕಾಮಗಾರಿಗಳಿಗೆ ತಡೆ ಕೊಟ್ಟಿದ್ದಾರೆ ಎಂದು ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಕೆಲವರು ಬಿಜೆಪಿ ಸೇರಿದ ಅನರ್ಹರ ಕ್ಷೇತ್ರಗಳಿಗೆ ಮತ್ತು ಬಿಜೆಪಿ ಗೆದ್ದ ಕ್ಷೇತ್ರದ ಕಾಮಗಾರಿಗಳಿಗೆ ತಡೆ ನೀಡಿದ್ದಾರೆ. ದ್ವೇಷದ ರಾಜಕಾರಣ ಬಿಡದೇ ಇದ್ದರೆ, ಮುಂದಿನ ದಿನಗಳಲ್ಲಿ ಒಂದಲ್ಲ ಒಂದು ದಿನ ಅನುಭವಿಸುತ್ತೀರ ಎಂದು ರೇವಣ್ಣ ಕಿಡಿಕಾರಿದ್ದಾರೆ. ಇನ್ನು ನೆರೆಪರಿಹಾರದ ಬಗ್ಗೆ ಮಾತನಾಡಿದ ರೇವಣ್ಣ, ಉತ್ತರ ಕರ್ನಾಟಕದ ಜನರ ಪರಿಸ್ಥಿತಿ ಹಾಗೆ ಇದೆ. ಸುಮ್ನೆ ಕೇಂದ್ರ ಸರ್ಕಾರದ ಮೇಲೆ ಹೇಳಿಕೊಂಡು ಕಾಲ ಹರಣ ಮಾಡುತ್ತಿದ್ದಾರೆ. ರಾಜಕೀಯ ದ್ವೇಷ ಬಿಟ್ಟು ಕೆಲಸ ಮಾಡಿ. ಇವರೆಲ್ಲ ಕರ್ನಾಟಕದ ಜನತೆ ಅಲ್ವೇ ? ಈ ಕುರಿತು ಅಧಿವೇಶನದಲ್ಲಿ ಚರ್ಚೆ ಮಾಡುತ್ತೇನೆ ಎಂದು ರೇವಣ್ಣ ಹೇಳಿದ್ದಾರೆ.

ಆಯುಧ ಪೂಜೆಯ ದಿನ ಫ್ರಾನ್ಸ್‌ನಲ್ಲಿ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ನಿಂಬೆಹಣ್ಣು ಇಟ್ಟು ರಫೆಲ್‌ಗೆ ಪೂಜೆ ಮಾಡಿದ್ದರ ಬಗ್ಗೆ ಮಾತನಾಡಿದ ರೇವಣ್ಣ, ನನ್ನನ್ನು ನಿಂಬೇಹಣ್ಣು ರೇವಣ್ಣ ಎಂದು ಗೇಲಿ ಮಾಡುತ್ತಿದ್ದ ಬಿಜೆಪಿ ಮುಖಂಡರು ಈಗೇನು ಹೇಳುತ್ತೀರಿ..? ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ, ಮರು ಚುನಾವಣೆಯ ಕೆ.ಆರ್.ಪೇಟೆ ಸೇರಿದಂತೆ ಎಲ್ಲಾ ಕಡೆ ಚುನಾವಣಾ ಪ್ರಚಾರಕ್ಕೆ ಹೋಗುತ್ತೇನೆ. ಬಿಜೆಪಿಯನ್ನು ರಾಜ್ಯದಿಂದ ತೆಗೆಯುವುದೇ ನಮ್ಮ ಗುರಿ ಎಂದು ಹೇಳಿದ್ದಾರೆ.

Recommended For You

About the Author: TV5 Kannada

Leave a Reply

Your email address will not be published. Required fields are marked *