‘ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಿ, ಸಿಎಂ ವಿರುದ್ಧ ನಾವು ಷಡ್ಯಂತ್ರ ಮಾಡಿಲ್ಲ’

ಬೆಳಗಾವಿ: ಇಬ್ಬರು ಕೇಂದ್ರ ಸಚಿವರಿಂದ ಸಿಎಂ ಯಡಿಯೂರಪ್ಪ ವಿರುದ್ಧ ಷಡ್ಯಂತ್ರದ ಬಗ್ಗೆ ಯತ್ನಾಳ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಸುರೇಶ್ ಅಂಗಡಿ, ಯತ್ನಾಳ್ ಅವರ ಹೇಳಿಕೆ ಬಗ್ಗೆ ಅವರನ್ನೇ ನೀವು ಕೇಳಿ. ಯತ್ನಾಳ್ ಅವರೇ ಸರಿಯಾದ ಉತ್ತರ ಕೊಡ್ತಾರೆ ಎಂದು ಹೇಳಿದ್ದಾರೆ.

ಪಕ್ಷದಲ್ಲಿ ಯಡಿಯೂರಪ್ಪ ಅವರಷ್ಟು ಸ್ಟ್ರಾಂಗ್ ನಾಯಕರು ಯಾರು ಇಲ್ಲ. ಯಡಿಯೂರಪ್ಪನವರೇ ನಮ್ಮ ನಾಯಕರು, ನಮ್ಮ ಮುಖ್ಯಮಂತ್ರಿಗಳು. ರಾಜ್ಯದಲ್ಲಿ ನಾನು ಪ್ರಹ್ಲಾದ ಜೋಶಿ, ಸದಾನಂದ ಗೌಡರು ಮತ್ತು ನಿರ್ಮಲಾ ಸೀತಾರಾಮನ್ ಕೇಂದ್ರ ಸಚಿವರಿದ್ದೇವೆ. ನಾವು ಯಾರೂ ಅವರ ವಿರುದ್ಧ ಷಡ್ಯಂತ್ರ ಮಾಡಿಲ್ಲ. ಯಾರು ಷಡ್ಯಂತ್ರ ಮಾಡುತ್ತಿದ್ದಾರೆ ಅವರನ್ನೇ ಕೇಳಿ ಎಂದು ಸುರೇಶ್ ಅಂಗಡಿ ಹೇಳಿದ್ದಾರೆ.

ಬಿಜೆಪಿ ಪಕ್ಷ ಶಿಸ್ತಿನ ಪಕ್ಷ. ಯಾವುದೇ ರೀತಿಯ ಗೊಂದಲವಿಲ್ಲ. ಬಿಎಸ್‌ವೈ ವಿರುದ್ಧ ಷಡ್ಯಂತ್ರ ಮಾಡುವವರ ಬಗ್ಗೆ ನನಗೆ ಗೊತ್ತಿಲ್ಲ. ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ಅನ್ಯಾಯ ಮಾಡಿಲ್ಲ. 1200 ಕೋಟಿ ರುಪಾಯಿ ಪರಿಹಾರ ನೀಡಿದ್ದಾರೆ. ಯತ್ನಾಳ್ ಅವರು ಹಿರಿಯ ನಾಯಕರು. ವಾಜಪೇಯಿ ಕಾಲದಲ್ಲಿ ಕೆಲಸ ಮಾಡಿದ್ದಾರೆ. ಯತ್ನಾಳ್ ಅವರು ಸ್ಪಷ್ಟವಾಗಿ ಈ ಬಗ್ಗೆ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

Recommended For You

About the Author: TV5 Kannada

Leave a Reply

Your email address will not be published. Required fields are marked *