‘ಕಾಗೇರಿ ಕ್ಲಾಸ್ ಟೀಚರ್ ಅಲ್ಲ, ನಾವು ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳೂ ಅಲ್ಲ’

ಬೆಂಗಳೂರು: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಬಿಜೆಪಿ ಸದಸ್ಯರಂತೆ ವರ್ತಿಸುತ್ತಿದ್ದಾರೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವಿಟರ್​ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

ವಿಧಾನಸಭೆ ಶಿಷ್ಟಾಚಾರದ ಬಗ್ಗೆ ನಮಗೆ ಗೊತ್ತಿದೆ. ಮಾಧ್ಯಮದ ಅಭಿವ್ಯಕ್ತ ಸ್ವಾತಂತ್ರ್ಯ ದಮನ ಮಾಡಿದ್ದಾರೆ. ಸ್ಪೀಕರ್ ವರ್ತನೆ ಅನುಮಾನಕ್ಕೆ ಕಾರಣವಾಗಿದೆ. ಕಾಗೇರಿ ಅವರು ಕ್ಲಾಸ್ ಟೀಚರ್ ಅಲ್ಲ, ನಾವು ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳೂ ಅಲ್ಲ ಎಂದು ಸಿದ್ದರಾಮಯ್ಯ ತಮ್ಮ ಟ್ವಿಟರ್​ ಖಾತೆಯ ​ವಾಲ್​ನಲ್ಲಿ ಬರೆದುಕೊಂಡಿದ್ದಾರೆ.

ಇನ್ನು ಸ್ಪೀಕರ್ ಸದನದಲ್ಲಿ ಅಂಪೈರ್ ರೀತಿ ಇರಬೇಕು ಅವರೇ ಆಟಗಾರರ ರೀತಿ ಮೈದಾನಕ್ಕೆ ಇಳಿದಿದ್ದಾರೆ. ಈ ರೀತಿ ಇಳಿದರೆ ನಾವು ಸುಮ್ಮನಿರೋಕೆ ಸಾಧ್ಯವೇ(?) ನಾವು ಆಟಗಾರರ ರೀತಿ ಎದುರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವಿಟ್​ ಮಾಡಿದ್ದಾರೆ.

Recommended For You

About the Author: TV5 Kannada

Leave a Reply

Your email address will not be published. Required fields are marked *