ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ ಎಂಬ ಗುರೂಜಿ ಭವಿಷ್ಯಕ್ಕೆ ಶ್ರೀರಾಮುಲು ಪ್ರತಿಕ್ರಿಯೆ

ಚಿತ್ರದುರ್ಗ: ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆ ಆಸ್ಪತ್ರೆ ಹೊರಗೆ ಹೆರಿಗೆ ಆದ ಪ್ರಕರಣದ ವಿಚಾರವಾಗಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಶುಕ್ರವಾರ ಪ್ರತಿಕ್ರಿಯಿಸಿದರು.

ಚಿತ್ರದುರ್ಗದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ವಿಜಯಪುರ ಜಿಲ್ಲಾಸ್ಪತ್ರೆ ಘಟನೆ ತನಿಖೆಗೆ ಆದೇಶಿಸಿದ್ದೇನೆ. ವೈದ್ಯರು, ಸಿಬ್ಬಂದಿ ಮೇಲೆ ತನಿಖೆ ಮಾಡಿ, ತಪ್ಪಿತಸ್ಥರ ಮೇಲೆ ಕ್ರಮಕೈಗೊಳ್ಳಲು ಸೂಚಿಸಿದ್ದೇನೆ ಎಂದು ಅವರು ತಿಳಿಸಿದರು.

ಶ್ರೀರಾಮುಲುಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆಗೆ ಬಗ್ಗೆ ಮಾತನಾಡಿದ ಅವರು, ಹೋರಾಟಗಾರರಿಗೆ ಹೋರಾಟ ಮಾಡುವ ಹಕ್ಕಿದೆ. ಶಾಂತಿಯುತವಾಗಿ ಹೋರಾಟ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ನೆರೆ ವಿಷಯದಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪರಿಹಾರ ಕೊಟ್ಟಿದೆ. ಬೇರೆ ರಾಜ್ಯಗಳಿಗಿಂತ ಹೆಚ್ಚಿನ ಪರಿಹಾರ ನೀಡಿದೆ ಎಂದರು.

ಅಲ್ಲದೇ ಹಾಸನದಲ್ಲಿ ಬ್ರಹ್ಮಾಂಡ ಗುರೂಜಿ ಹೇಳಿಕೆಗೆ ಸಂಬಂಧಿದಂತೆ ಮಾತನಾಡಿದ ಆರೋಗ್ಯ ಸಚಿವರು, ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ಬೇರೆ ಬೇರೆ ರಾಷ್ಟ್ರಗಳ ಜೊತೆ ಸ್ನೇಹ ಸಂಪಾದಿಸಿದ್ದಾರೆ. ಅವರು ಸಮರ್ಥರಿದ್ದಾರೆ, ಅವರಿಗೆ ಏನೂ ಆಗೋದಿಲ್ಲ ಎಂದು ಅವರು ನುಡಿದರು.

ಇದೇ ವೇಳೆ ಡಿ.ಕೆ. ಶಿವಕುಮಾರ್ ಅವರು ಮುಂದಿನ ಸಿಎಂ ಆಗ್ತಾರೆ ಎಂಬ ಗುರೂಜಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ದೇವರ ಇಚ್ಛೆ ಏನಾಗತ್ತೋ ನೋಡೋಣ ಎಂದು ಚಿತ್ರದುರ್ಗದಲ್ಲಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಮಾತನಾಡಿದ್ದಾರೆ.

Recommended For You

About the Author: TV5 Kannada

Leave a Reply

Your email address will not be published. Required fields are marked *