ರಾಜ್ಯದ ರೈತರಿಗೆ ಕೇಂದ್ರ ಸರ್ಕಾರ ಸಂಕ್ರಾಂತಿ ಹಬ್ಬಕ್ಕೆ ಡಬಲ್​ ಹ್ಯಾಪಿ ನ್ಯೂಸ್​​!

ಬೆಂಗಳೂರು: ಸುಗ್ಗಿಯ ಹಬ್ಬ ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ರಾಜ್ಯದ ರೈತರಿಗೆ ಎರೆಡೆರಡು ಸಂತಸದ ಸುದ್ದಿ ನೀಡಿದೆ ಎಂದು ಕೇಂದ್ರ ರಸಗೊಬ್ಬರ ಸಚಿವ ಡಿ.ವಿ ಸದಾನಂದಗೌಡ ಅವರು ಟ್ವೀಟ್​ ಮಾಡುವ ಮೂಲಕ ರಾಜ್ಯದ ರೈತರಿಗೆ ತಿಳಿಸಿದ್ದಾರೆ.

ಬೆಂಬಲ ಬೆಲೆ ಯೋಜನೆಯಡಿ 6.68 ಲಕ್ಷ ಕ್ವಿಂಟಲ್ ಶೇಂಗಾ ಖರೀದಿಸಲು ಕರ್ನಾಟಕಕ್ಕೆ ಅನುಮತಿ ನೀಡಿದೆ. ಹಾಗೆಯೇ ಹೆಸರುಕಾಳು ಖರೀದಿ ಗಡುವನ್ನು ಜನವರಿ 31ರವರೆಗೆ ವಿಸ್ತರಿಸಿದೆ ಎಂದು ಸಚಿವರು ತಮ್ಮ ಟ್ವೀಟರ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Recommended For You

About the Author: user

Leave a Reply

Your email address will not be published. Required fields are marked *