‘ನಾನು ಬೆದರಿಸಿಲ್ಲ ಒತ್ತಾಯ ಮಾಡಿದ್ದೇನೆ’ – ವಚನಾನಂದ ಸ್ವಾಮೀಜಿ ಸ್ಪಷ್ಟನೆ

ದಾವಣಗೆರೆ: ಮೂರು ಜನ ಶಾಸಕರಿಗೆ ಸಚಿವ ಸ್ಥಾನ ನೀಡಿ ಅದರಲ್ಲೂ ಮುಖ್ಯವಾಗಿ ಮುರಗೇಶ್ ನಿರಾಣಿ ಅವರಿಗೆ ಸಚಿವ ಸ್ಥಾನ ನೀಡಲೇ ಬೇಕು ಎಂದಿರುವ ವಚನಾನಂದ ಸ್ವಾಮೀಜಿಗಳು ತಮ್ಮ ಹೇಳಿಕೆ ಮತ್ತೆ ಸಮರ್ಥನೆ ಮಾಡಿಕೊಂಡಿದ್ದಾರೆ.

ಜಿಲ್ಲೆಯ ಹರಿಹರ ಪಂಚಮಸಾಲಿ ಮಠದಲ್ಲಿ ಮಾತನಾಡಿದ ಅವರು, ಸಮಾಜದ ನ್ಯಾಯ ಕೇಳಬೇಕು, ಹಾಗಾಗಿ ನಾನು ಕೇಳಿದ್ದೇನೆ. ನಾನು ಬೆದರಿಸಿಲ್ಲ, ನಮ್ಮ ಹಕ್ಕು ಒತ್ತಾಯ ಮಾಡಿದ್ದೇನೆ ಎಂದು ಹೇಳಿದರು.

ಇನ್ನು ಮುರುಗೇಶ್ ನಿರಾಣಿ ಒಳ್ಳೆಯ ಕೆಲಸ ಮಾಡಿದ್ದಾರೆ. ನಮ್ಮ ಸಮಾಜಕ್ಕೆ ಅವರು ದುಡಿದಿದ್ದಾರೆ ಹಾಗಾಗೀ ಅವರಿಗೆ ಕೊಡಿ ಎಂದು ಕೇಳಿದ್ದೇನೆ ಎಂದು ಮುರುಗೇಶ್ ನಿರಾಣಿ ಅವರಿಗೆ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟ ಬಗ್ಗೆ ವಚನಾನಂದ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.

ಹರಿಹರದಲ್ಲಿ ನಡೆದ ಹರ ಜಾತ್ರೆ ವೇಳೆ ಪಂಚಮಸಾಲಿ ಪೀಠದಲ್ಲಿ ವಚನಾನಂದ ಸ್ವಾಮೀಜಿ ಭಾಷಣಕ್ಕೆ ಸಿಎಂ ವಿರೋಧ ವ್ಯಕ್ತಪಡಿಸಿದ್ದು, ಮುರುಗೇಶ್​ ನಿರಾಣಿಗೆ ಸಚಿವ ಸ್ಥಾನ ನೀಡಲೇಬೇಕು, ನೀಡದೆ ಹೋದರೆ ಸಮಾಜದಿಂದ ವಿರೋಧ ವ್ಯಕ್ತವಾಗುತ್ತೆ ಎಂದು ಸ್ವಾಮೀಜಿ ಆಗ್ರಹಿಸಿದರು. ಈ ವೇಳೆ ಸಿಎಂ, ನೀವು ನನಗೆ ಬೇದರಿಸಬೇಡಿ ಎಂದು ಸ್ವಾಮೀಜಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Recommended For You

About the Author: user

Leave a Reply

Your email address will not be published. Required fields are marked *