ಶಿವೈಕ್ಯ ಶಿವಕುಮಾರ ಶ್ರೀಗಳ ಪ್ರಥಮ ಪುಣ್ಯ ಸ್ಮರಣೆ..1 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ

ತುಮಕೂರು: ಸಿದ್ದಗಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯ ಪ್ರಥಮ ಪುಣ್ಯ ಸಂಸ್ಮರಣೆ ಕಾರ್ಯಕ್ರಮ ಜನವರಿ 19 ರಂದು ನಡೆಯಲಿದೆ.

ಈ ಕುರಿತು ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಆಡಳಿತಾಧಿಕಾರಿ ವಿಶ್ವನಾಥಯ್ಯ, ಸಿಎಂ ಯಡಿಯೂರಪ್ಪ ಸೇರಿದಂತೆ ಗಣ್ಯರು ಹಾಗೂ ಸಾಧು ಸಂತರು ಭಾಗವಹಿಸಲಿದ್ದಾರೆ ಎಂದರು.

ದೆಹಲಿ ಉದ್ಯಮಿ ಮುಖೇಶ್ ಗರ್ಗ್ ಎಂಬುವವರು ಶ್ರೀಗಳ ಬೆಳ್ಳಿ ಪುತ್ಥಳಿ ತಯಾರು ಮಾಡಿದ್ದು, ಪುಣ್ಯ ಸ್ಮರಣೆ ದಿನದಂದು ಗದ್ದುಗೆ ಮೇಲೆ ಪ್ರತಿಷ್ಠಾಪಿಸಲಾಗುವುದು ಎಂದರು. ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಸಕಲ ಸಿದ್ದತೆ ನಡೆಸಲಾಗುತ್ತಿದೆ ಎಂದು ಹೇಳಿದರು.

Recommended For You

About the Author: user

Leave a Reply

Your email address will not be published. Required fields are marked *