ಕೆಪಿಸಿಸಿ ಅಧ್ಯಕ್ಷ ಆಯ್ಕೆ ಪ್ರಕ್ರಿಯೆ: ಒಳಗಿನ ವಾಸ್ತವಾಂಶ ನಿಮಗ್ಯಾರಿಗೂ ಗೊತ್ತಿಲ್ಲ ಎಂದ ಕೆ.ಹೆಚ್ ಮುನಿಯಪ್ಪ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಇನ್ನೂ ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎಂದು ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ನೇಮಕದಲ್ಲಿ ಯಾರೂ ಏನೇ ಹೇಳಲಿ ಅಂತಿಮ ಅಲ್ಲ. ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಹೀಗಾಗಲೇ ಎಲ್ಲರ ಅಭಿಪ್ರಾಯಗಳನ್ನೂ ಹೈಕಮಾಂಡ್ ಪಡೆದುಕೊಂಡಿದೆ ಎಂದರು.

ಅಂತೆಯೇ, ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ಎಂಬಿ ಪಾಟೀಲ್ ಅವರ ಹೆಸರು ಮುಂಚೂಣಿ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿ, ಒಳಗಿನ ವಾಸ್ತವಾಂಶ ನಿಮಗೆ ಯಾರಿಗೂ ಗೊತ್ತಿಲ್ಲ. ಮುಂದಿನ ವಾರ ಹೈಕಮಾಂಡ್ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುತ್ತದೆ. ಅವರು ಹೇಳಿದ್ದು,ಇವರು ಹೇಳಿದ್ರು ಎಲ್ಲವೂ ನಡೆಯಲ್ಲ ಎಂದು ಪರೋಕ್ಷವಾಗಿ ಕೆ.ಹೆಚ್ ಮುನಿಯಪ್ಪ ಅವರು ಬೇರೆಯದೇ ಆಯ್ಕೆಯಿದೆ ಎಂಬ ಸುಳಿವು ಬಿಟ್ಟುಕೊಟ್ಟರು.

ಇನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಪಕ್ಷವು ಯಾರಿಗೇ ಕೊಟ್ಟರು, ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದರು. ಇನ್ನು, ಪಕ್ಷದಲ್ಲಿ ಭಿನ್ನಮತ ವಿಚಾರವಾಗಿ ಮಾತನಾಡಿ, ನಮ್ಮದು ರಾಷ್ಟ್ರೀಯ ಪಕ್ಷ, ದೊಡ್ಡ ಪಕ್ಷ. ದೊಡ್ಡ ಪಕ್ಷದಲ್ಲಿ ಅಸಮಾಧಾನ ಇರೋದು ಸಹಜ. ಇದೆಲ್ಲವನ್ನೂ ಸರಿಪಡಿಸಿಕೊಂಡು ಮುನ್ನಡೆಯುತ್ತೇವೆ ಎಂದು ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ ಅವರು ತಿಳಿಸಿದರು.

Recommended For You

About the Author: user

Leave a Reply

Your email address will not be published. Required fields are marked *