ಜಾತಿ, ಮತ, ಪಕ್ಷವೆಂದು ನೋಡದೆ ಲಕ್ಷಾಂತರ ಮಂದಿಗೆ ಹೆಗಲಾಗಿದ್ದೇನೆ ನಾನು ಮಣ್ಣಿನವ – ಕುಮಾರಸ್ವಾಮಿ

ಬೆಂಗಳೂರು: ನನ್ನನ್ನು ದೇಶದ್ರೋಹಿ, ಪಾಕಿಸ್ತಾನ ಪರ ವಾದಿ ಎಂದು ಕೂಗು ಮಾರಿಯಂತೆ ಅರಚುತ್ತಿರುವ ಪ್ರಹ್ಲಾದ್ ಜೋಶಿ ಅವರೇ, ದಿನಬೆಳಗಾದರೆ ಪಾಕಿಸ್ತಾನವನ್ನೇ ಜಪಿಸುವ ನಿಮ್ಮ ಮೂಲ ಪಾಕ್ ಇರಬಹುದೇನೋ ನನಗೆ ಗೊತ್ತಿಲ್ಲ. ಪಾಕಿಸ್ತಾನದ ನೆಲ ಸ್ಪರ್ಶಿಸಿ, ಬಿರಿಯಾನಿ ತಿಂದು ಬಂದ ಪ್ರಧಾನಿಯ ಮಂತ್ರಿಮಂಡಲದಲ್ಲಿರುವ ನೀವು ದೇಶಭ್ರಷ್ಟರು. ನಾನು ಈ ಮಣ್ಣಿನವ‌ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

ರೈತರ ಸಾಲಮನ್ನಾ, ಬಡವರ ಬಂಧು, ಸಾಲ ಋಣಮುಕ್ತ ಕಾಯ್ದೆ ಇವೆಲ್ಲವೂ ನಾನು ತಂದ ಕಾರ್ಯಕ್ರಮಗಳು. ಇವು ದೇಶವಿರೋಧಿಯೇ? ನಿಮ್ಮ ಸರ್ಕಾರ ಜಾರಿಗೆ ತಂದಿರುವ ದೇಶಭಕ್ತಿಯ ಕಾರ್ಯಕ್ರಮಗಳನ್ನು ತೋರಿಸಿ ನೋಡೋಣ‌. ಬಡವ ಬಲ್ಲಿದರು ಬೇಕಿಲ್ಲದ ನಿಮಗೆ ಕೋಮು ಭಾವನೆಗಳೇ ಬಂಡವಾಳ. ನಿಮ್ಮಂಥ ದೇಶಪ್ರೇಮ (ದ್ರೋಹ) ನಮಗೆ ಬೇಕಿಲ್ಲ ಸುರೇಶ್ ಅವರೇ ಎಂದು ಕುಮಾರಸ್ವಾಮಿ ಟ್ವೀಟ್​ ಮಾಡುವ ಮೂಲಕ ಟಾಂಗ್​ ಕೊಟ್ಟಿದ್ದಾರೆ.

‘ಆತ’ನ ದೇಶಭಕ್ತಿಗೆ ಸಾಕ್ಷ್ಯ ಕೊಡುವ ಸುರೇಶ್ ಕುಮಾರ್ ಅವರೇ, ನನ್ನ ಮನೆಗೆ ಒಮ್ಮೆ ಬನ್ನಿ. ನಿತ್ಯವೂ ಸಾವಿರಾರು ಮಂದಿ ನೆರವು ಕೋರಿ ನನ್ನ ಹುಡುಕಿ ಬರುತ್ತಾರೆ. ಬಾಲ್ಯದಿಂದ ಈವರೆಗೆ ಜಾತಿ, ಮತ, ಪಕ್ಷವೆಂದು ನೋಡದೆ ಲಕ್ಷಾಂತರ ಮಂದಿಗೆ ಹೆಗಲಾಗಿದ್ದೇನೆ. ಅದನ್ನು ನಾನು ವರ್ಣಿಸಿಕೊಳ್ಳಬೇಕಿಲ್ಲ‌.ಹಾಗೇ ನಿಮ್ಮಿಂದ ದೇಶ ಭಕ್ತಿ ತಿಳಿಯಬೇಕಿಲ್ಲ ಎಂದು ಸುರೇಶ್​ ಕುಮಾರ್​ಗೆ ಟಾಂಗ್​ ಕೊಟ್ಟರು.

Recommended For You

About the Author: user

Leave a Reply

Your email address will not be published. Required fields are marked *