‘ಆ ಮೂವರು ಶಾಸಕರಿಗೆ ಸಚಿವ ಸ್ಥಾನ ನೀಡಲೇಬೇಕಿದೆ’ – ಕೆ.ಎಸ್​.ಈಶ್ವರಪ್ಪ

ಶಿವಮೊಗ್ಗ: ಮಂಗಳೂರು ಬಾಂಬ್ ಪ್ರಕರಣದಲ್ಲಿ ಆರೋಪಿ ಆದಿತ್ಯ ರಾವ್ ಅವರನ್ನು ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಅನಗತ್ಯವಾಗಿ ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್​.ಈಶ್ವರಪ್ಪ ಅವರು ಶುಕ್ರವಾರ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಈ ಮೂಲಕ ಪೊಲೀಸರ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾಹಿತಿ ತನಿಖೆ ಪ್ರಗತಿಯಲ್ಲಿದ್ದು ವರದಿ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಇನ್ನು ಸಚಿವ ಸಂಪುಟ ರಚನೆ ಕೆಲ ರಾಜ್ಯದಲ್ಲಿನ ಚುನಾವಣೆ, ಪೌರತ್ವ ಮಸೂದೆ ಜಾರಿ ಮತ್ತಿತರ ಕಾರಣಗಳಿಂದ ವಿಳಂಬವಾಗಿದೆ. ಪಕ್ಷೇತರ ಶಾಸಕ ಶಂಕರ್, ಮಸ್ಕಿ ಶಾಸಕ ಪಾಟೀಲ್ ಹಾಗೂ ಆರ್.ಆರ್.ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡಲೇಬೇಕಿದೆ ಎಂದರು.

ಇನ್ನುಳಿದವರ ಕುರಿತು ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಹೈ ಕಮಾಂಡ್ ಹೇಳಿದರೆ ಹಾಲಿ ಸಚಿವರು ತಮ್ಮ ಸ್ಥಾನವನ್ನು ತ್ಯಾಗ ಮಾಡಬೇಕಾಗುತ್ತದೆ. ಬಿಜೆಪಿಯಲ್ಲಿ ಮೂಲ ಹಾಗೂ ವಲಸಿಗರು ಎಂಬ ವ್ಯತ್ಯಾಸವಿಲ್ಲ. ನಾವು ಹಾಲು ಸಕ್ಕರೆಯಂತೆ ಬೆರೆತು ಹೋಗಿದ್ದೇವೆ. ಆದರೆ, ಕಾಂಗ್ರೆಸ್​ನಲ್ಲಿ ಮೂಲ ಹಾಗೂ ವಲಸಿಗ ಎಂಬ ವ್ಯತ್ಯಾಸವಿದೆ ಎಂದು ಹೇಳಿದರು.

ಸದ್ಯ ಕಾಂಗ್ರೆಸ್​ನವರು ಹಾಲು ಸಕ್ಕರೆಯಂತೆ ಬೆರೆಯದೆ ಹಾಲು ವಿಷದಂತಾಗಿದ್ದಾರೆ. ಸಿದ್ದರಾಮಯ್ಯ ಅವರನ್ನು ಹೊರಹಾಕಲು ಡಿಕೆಶಿ ಅವರು ಸೇರಿದಂತೆ ಮೂಲ ಕಾಂಗ್ರೆಸಿಗರು ಯತ್ನಿಸುತ್ತಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವರಿ ಸಚಿವ ಕೆ.ಎಸ್​.ಈಶ್ವರಪ್ಪ ಅವರು ತಿಳಿಸಿದರು.

Recommended For You

About the Author: user

Leave a Reply

Your email address will not be published. Required fields are marked *