ದೇವೇಗೌಡ ಹಾಗೂ ಕುಮಾರಸ್ವಾಮಿಗೆ ಕಷ್ಟವಾಗುತ್ತದೆ. ಜ್ಯೋತಿಷ್ಯ ನಿಷೇಧಿಸುವುದಿಲ್ಲ – ಆರ್​ ಅಶೋಕ್​

ಬೆಂಗಳೂರು: ಮೌಢ್ಯ ಪ್ರತಿಬಂಧಕ ಕಾಯ್ದೆಯನ್ನು ಕೆಲ ಬದಲಾವಣೆಗಳೊಂದಿಗೆ ಜಾರಿಗೊಳಿಸಲು ಸರ್ಕಾರ ಉದ್ದೇಶಿಸಿದೆ ಎಂದು ಕಂದಾಯ ಸಚಿವ ಆರ್​. ಅಶೋಕ್ ಶುಕ್ರವಾರ​ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಜ್ಯೋತಿಷ್ಯವನ್ನು ಪ್ರತಿಬಂಧಿಸುವುದಿಲ್ಲ, ಜ್ಯೋತಿಷ್ಯ ವಿಜ್ಞಾನ ಎಂದು ಸಾಬೀತಾಗಿದೆ. ಆದರೆ, ಮೌಢ್ಯ ಬಿತ್ತುವ ನಕಲಿ ಜ್ಯೋತಿಷಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಆರ್​. ಅಶೋಕ್ ತಿಳಿಸಿದರು.

ಈ ಹಿಂದೆ  ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಾಯ್ದೆಯಲ್ಲಿ ಧರ್ಮದ ವಿಷಯವನ್ನೂ ಬೆರೆಸಿತ್ತು, ಆ ಕಾರಣಕ್ಕೆ ನಾವು ವಿರೋಧಿಸಿದ್ದೆವು, ಮೌಢ್ಯ ಹರಡುವುದನ್ನು ಬಿಜೆಪಿ ವಿರೋಧಿಸುತ್ತದೆ.  ಹಾಗೆ ನೋಡಿದರೆ ಜ್ಯೋತಿಷ್ಯ ನಂಬೋದು ಜೆಡಿಎಸ್ ಕಾಂಗ್ರೆಸ್ ಪ್ರಮುಖರೇ,  ಈಗ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮಧ್ಯ ಪ್ರದೇಶದಲ್ಲಿ ಹೋಮ ಮಾಡಿಸುತ್ತಿಲ್ಲವೇ ಎಂದು ಆರ್​.ಅಶೋಕ್​ ಹೇಳಿದರು.

ಇನ್ನೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿಯವರು ಯಾವಾಗಲೂ ಜ್ಯೋತಿಷ್ಯವನ್ನು ನಂಬುತ್ತಾರೆ. ನಾವು ಜ್ಯೋತಿಷ್ಯ ನಿಷೇಧಿಸಿದರೆ ಅವರಿಗೆ ಕಷ್ಟವಾಗುತ್ತದೆ. ಹಾಗಾಗಿ ಜ್ಯೋತಿಷ್ಯ ನಿಷೇಧಿಸುವುದಿಲ್ಲ ಎಂದು ಆರ್​.ಅಶೋಕ್​ ತಿಳಿಸಿದರು.

Recommended For You

About the Author: user

Leave a Reply

Your email address will not be published. Required fields are marked *