Top

'ಹೆಚ್ಡಿಕೆ ದೇಶ ಒಡೆಯೋ ಕೆಲಸ ಮಾಡ್ತಿದ್ದಾರೆ, ಸಿದ್ದರಾಮಯ್ಯ ಯಾರಿಗೂ ಬೇಡವಾಗಿದ್ದಾರೆ'

ಹೆಚ್ಡಿಕೆ ದೇಶ ಒಡೆಯೋ ಕೆಲಸ ಮಾಡ್ತಿದ್ದಾರೆ, ಸಿದ್ದರಾಮಯ್ಯ ಯಾರಿಗೂ ಬೇಡವಾಗಿದ್ದಾರೆ
X

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಮಾತನಾಡಿದ್ದು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಭೂಪಟದಲ್ಲಿ ಪಾಕ್ ಇಲ್ಲವಾಗಿದ್ದರೆ ಬಿಜೆಪಿ ಮತ ಗಳಿಸದು ಎಂಬ ಹೇಳಿಕೆಗೆ ಶ್ರೀರಾಮುಲು ತಿರುಗೇಟು ನೀಡಿದ್ದು, ಇತ್ತೀಚೆಗೆ ಮಾಜಿ ಸಿಎಂ ಕುಮಾರಸ್ವಾಮಿಗೆ ಪಾಕ್ ಮೇಲೆ ಪ್ರೀತಿ ಬೆಳೆದಿದೆ. ಪಾಕ್ ಮೇಲೆ ಪ್ರೀತಿಯಿರುವ ಕುಮಾರಸ್ವಾಮಿ ದೇಶ ಬಿಟ್ಟು ತೊಲಗಲಿ. ಮಾಜಿ ಪ್ರಧಾನಿ ಪುತ್ರ, ಮಾಜಿ ಸಿಎಂ ಆಗಿ ಈ ರೀತಿ ಹೇಳಿಕೆ ಸರಿಯಲ್ಲ ಎಂದಿದ್ದಾರೆ. ಅಲ್ಲದೇ, ಭಾರತ ದೇಶ ಹಿಂದೂ ರಾಷ್ಟ್ರ ಇಲ್ಲಿ ಎಲ್ಲರೂ ಸಮಾನರಾಗಿ ಬಾಳ್ವೆ ಮಾಡುತ್ತಿದ್ದಾರೆ. ದೇಶ ಒಡೆಯುವ ಷಡ್ಯಂತ್ರಕ್ಕಾಗಿ ಇಲ್ಲ ಸಲ್ಲದ ಮಾತು ಸರಿಯಲ್ಲ ಎಂದಿದ್ದಾರೆ.

ರಾಜ್ಯ ಸರ್ಕಾರ ಟೇಕ್ ಆಫ್ ಆಗಿಲ್ಲ ಎಂದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಶ್ರೀರಾಮುಲು, ಮಾಜಿ ಸಿಎಂ ಸಿದ್ಧರಾಮಯ್ಯ ಇಂಗ್ಲಿಷ್ ಪದ ಬಳಸಿ ಟೀಕಿಸುತ್ತಾರೆ. ಇತ್ತೀಚಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಕಾಣಿಸ್ತಿಲ್ಲ, ಯಾರಿಗೂ ಬೇಡದ ವ್ಯಕ್ತಿ ಆಗಿದ್ದಾರೆ. ವಿಪಕ್ಷ ಸ್ಥಾನ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಲಾಭಿ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ಡೆತ್ ಆಗಿರುವ ಪಾರ್ಟಿ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.

Next Story

RELATED STORIES