Top

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ - ಕುಮಾರಸ್ವಾಮಿ

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ - ಕುಮಾರಸ್ವಾಮಿ
X

ಬೆಂಗಳೂರು: ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ. ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

https://twitter.com/hd_kumaraswamy/status/1220928062566457344

ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು. ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

"ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು" ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು ಎಂದು ಟ್ವೀಟ್​ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ ಎಂದು ಕಿಡಿಕಾರಿದ್ದಾರೆ.

Next Story

RELATED STORIES