ಕೆಪಿಸಿಸಿ ಅಧ್ಯಕ್ಷರ ನೇಮಕಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್..!

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ನೇಮಕಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಫೆಬ್ರವರಿ 10 ಇಲ್ಲವೇ 13ರಂದು ಅಧಿಕೃತ ಘೋಷಣೆ ಸಾಧ್ಯತೆ ಇದೆ.

ಹಿರಿಯನಾಯಕರ ಅಭಿಪ್ರಾಯದ ಮೇರೆಗೆ ಸೋನಿಯಾಗಾಂಧಿ ಈ ನಿರ್ಧಾರ ಮಾಡಿದ್ದು, ಖರ್ಗೆ, ಮುನಿಯಪ್ಪ, ಬಿ.ಕೆ.ಹರಿಪ್ರಸಾದ್‌ರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಅಲ್ಲದೇ, ದೂರವಾಣಿ ಮೂಲಕವೂ ಸಿದ್ದರಾಮಯ್ಯ, ಪರಮೇಶ್ವರ್ ಜೊತೆ ಮಾತುಕತೆ ನಡೆಸಲಾಗಿದ್ದು, ಎರಡೆರಡು ಬಾರಿ ರಾಜ್ಯ ಕಾಂಗ್ರೆಸ್ ನಾಯಕರ ಅಭಿಪ್ರಾಯ ಸಂಗ್ರಹಿಸಲಾಗಿದೆ.

ಫೆಬ್ರವರಿ 15ರೊಳಗೆ ನೂತನ ಅಧ್ಯಕ್ಷರ ಹೆಸರು ಘೋಷಣೆ ಮಾಡುವ ಸಾಧ್ಯತೆ ಇದ್ದು, ಇಬ್ಬರು ಕಾರ್ಯಾಧ್ಯಕ್ಷರ ನೇಮಕಕ್ಕೂ ಹೈಕಮಾಂಡ್ ನಿರ್ಧರಿಸಿದೆ. ಕಾರ್ಯಾಧ್ಯಕ್ಷರ ನೇಮಕಕ್ಕೆ ಡಿಕೆಶಿಯಿಂದಲೂ ಸಹಕಾರ ಸಿಕ್ಕಿದ್ದು, ನಾಲ್ವರ ಬದಲಿಗೆ ಇಬ್ಬರು ಕಾರ್ಯಾಧ್ಯಕ್ಷರ ನೇಮಕ ಮಾಡಲು ನಿರ್ಧರಿಸಿದೆ. ಇನ್ನು ಅಧ್ಯಕ್ಷರಾಗಿ ಡಿಕೆಶಿ ಹೆಸರು ಘೋಷಣೆ ಮಾಡುವುದು ಬಹುತೇಕ ಖಚಿತವಾಗಿದೆ.

Recommended For You

About the Author: user

Leave a Reply

Your email address will not be published. Required fields are marked *