ಶೆಟ್ಟರ್, ಜೋಶಿಗೆ ವೇದಿಕೆಯಲ್ಲೇ ಎಚ್ಚರಿಕೆ ನೀಡಿದ ಬಿಜೆಪಿ ಶಾಸಕ..!

ಧಾರವಾಡ: ನಿನ್ನೆ ನಡೆದಿದ್ದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಅಮೃತ್ ದೇಸಾಯಿ ಕೇಂದ್ರ, ರಾಜ್ಯ ಸರ್ಕಾರದ ಸಚಿವರಿಗೆ ಶಾಸಕ ಎಚ್ಚರಿಕೆ ನೀಡಿದ್ದಾರೆ.

ಧಾರವಾಡದಲ್ಲಿ ನಡೆದಿದ್ದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸಚಿವ ಜಗದೀಶ್ ಶೆಟ್ಟರ್, ಶಾಸಕ ಅಮೃತ್ ದೇಸಾಯಿ ಸೇರಿ ಹಲವು ಗಣ್ಯರು ಭಾಗವಹಿಸಿದ್ದರು. ಈ ವೇಳೆ ವೇದಿಕೆಯಲ್ಲಿ ಮಾತನಾಡುವಾಗ ದೇಸಾಯಿ ಎಚ್ಚರಿಕೆ ನೀಡಿದ್ದಾರೆ.

ನನ್ನ ಕ್ಷೇತ್ರದಿಂದ ಹುಬ್ಬಳ್ಳಿ-ಧಾರವಾಡಕ್ಕೆ ನೀರು ನೀಡುತ್ತೇವೆ. ನಾವು ನೀರು ಕೊಟ್ಟಮೇಲೆ ನೀವು ನೀರು ಕುಡಿಯೋದು. ನನ್ನ ಕ್ಷೇತ್ರದ 14 ಹಳ್ಳಿಗಳಿಗೆ ನೀರು ನೀಡಲಾಗುತ್ತಿದೆ. ಕ್ಷೇತ್ರದ ಎಲ್ಲ ಹಳ್ಳಿಗಳಿಗೆ ಮಲಪ್ರಭಾ ನೀರು ನೀಡಬೇಕು. ನನ್ನ ಕ್ಷೇತ್ರದ ಅಮ್ಮಿನಬಾವಿಯಲ್ಲಿ ಘಟಕ ಇದೆ. ಬಹುಮುಖ್ಯವಾಗಿ ಇಲ್ಲಿನ ಸ್ಥಳೀಯರಿಗೆ ಉದ್ಯೋಗ ನೀಡಬೇಕು. ಬೇರೆ ಬೇರೆ ಭಾಗಗಳಲ್ಲಿನ ಜನರಿಗೆ ಉದ್ಯೋಗ ನೀಡಬೇಡಿ. ಕ್ಷೇತ್ರದಲ್ಲಿ ಸಾಕಷ್ಟು ನಿರುದ್ಯೋಗ ಸಮಸ್ಯೆಯಿದೆ. ನನ್ನ ಕ್ಷೇತ್ರದ ಜನರಿಗೆ ಉದ್ಯೋಗ ಕೊಡಲಿಲ್ಲ ಎಂದರೆ ನಿಮಗೆ ನೀರು ಕೊಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇನ್ನು ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

Recommended For You

About the Author: user

Leave a Reply

Your email address will not be published. Required fields are marked *