‘ಡೊನಾಲ್ಡ್​​ ಟ್ರಂಪ್​ಗೆ ಭಾರತವು ಸ್ಮರಣೀಯ ಸ್ವಾಗತ ನೀಡಲಿದೆ’ – ಪ್ರಧಾನಿ ಮೋದಿ

ನವದೆಹಲಿ: ಫೆಬ್ರವರಿ 24 ಮತ್ತು 25ರಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತಕ್ಕೆ ಭೇಟಿ ನೀಡುತ್ತಿರುವುದು ತುಂಬಾ ಸಂತೋಷಕರವಾದುದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಟ್ವಿಟ್​ ಮಾಡುವ ಮೂಲಕ ತಿಳಿಸಿದ್ದಾರೆ.

ಭಾರತವು ನಮ್ಮ ಗೌರವಾನ್ವಿತ ಅತಿಥಿಗಳಿಗೆ ಸ್ಮರಣೀಯ ಸ್ವಾಗತವನ್ನು ನೀಡುತ್ತದೆ. ಈ ಭೇಟಿ ಬಹಳ ವಿಶೇಷವಾದದ್ದು ಮತ್ತು ಭಾರತ-ಯುಎಸ್ಎ ಸ್ನೇಹವನ್ನು ಮತ್ತಷ್ಟು ಗಟ್ಟಿಗೊಳಿಸುವಲ್ಲಿ ಇದು ಬಹಳ ಸಹಕಾರಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.

ಭಾರತ ಮತ್ತು ಯುಎಸ್ಎ ಪ್ರಜಾಪ್ರಭುತ್ವ ಮತ್ತು ಬಹುತ್ವಕ್ಕೆ ಸಾಮಾನ್ಯ ಬದ್ಧತೆಯನ್ನು ಹಂಚಿಕೊಳ್ಳುತ್ತವೆ. ನಮ್ಮ ರಾಷ್ಟ್ರಗಳು ವ್ಯಾಪಕವಾದ ಸಮಸ್ಯೆಗಳಿಗೆ ವ್ಯಾಪಕವಾಗಿ ಸಹಕರಿಸುತ್ತಿವೆ. ನಮ್ಮ ರಾಷ್ಟ್ರಗಳ ನಡುವಿನ ಸ್ನೇಹವು ನಮ್ಮ ನಾಗರಿಕರಿಗೆ ಮಾತ್ರವಲ್ಲದೆ ಇಡೀ ಜಗತ್ತಿಗೆ ಉತ್ತಮವಾಗಿದೆ ಎಂದು ಪ್ರಧಾನಿ ಮೋದಿ ಅವರು ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

ಅಧ್ಯಕ್ಷ ಟ್ರಂಪ್ ಅಮೆರಿಕದಲ್ಲಿ ಸುದ್ದಿಗಾರರಿಗೆ ತಮ್ಮ ಮೊದಲ ಭಾರತ ಭೇಟಿಯನ್ನು ಎದುರು ನೋಡುತ್ತಿದ್ದೇನೆ ಜೊತೆಗೆ ಉಭಯ ದೇಶಗಳು ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಬಹುದು ಎಂದು ಸೂಚಿಸಿದ ಕೆಲವೇ ಗಂಟೆಗಳ ಬಳಿಕ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

Recommended For You

About the Author: user

Leave a Reply

Your email address will not be published. Required fields are marked *