‘ಈ ವಿಷಯದ ಬಗ್ಗೆ ಸಿದ್ದರಾಮಯ್ಯ ಒತ್ತಾಯಿಸಿರುವುದು ಹಾಸ್ಯಾಸ್ಪದ’

ಬೆಂಗಳೂರು: ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಸಿ.ಟಿ.ರವಿ, ಬಂದ್‌ಗೆ ಕರೆ ನೀಡಿರುವ ಸಂಘಟನೆಗಳ ಜತೆ ಈಗಾಗಲೆ ಸಿಎಂ, ನಾನು ಹಾಗೂ ಡಿಸಿಎಂ ಅಶ್ವತ್ಥ್ ನಾರಾಯಣ್ ಮಾತುಕತೆ ನಡೆಸಿದ್ದೇವೆ. ಸರೋಜಿನಿ ಮಹಿಷಿ ವರದಿ ಜಾರಿಗೆ ನಮ್ಮ ಸರ್ಕಾರ ಬದ್ದವಾಗಿದೆ. ಆದರೆ ಖಾಸಗಿ ವಲಯದಲ್ಲಿ ವರದಿ ಜಾರಿ ಸುಲಭವಲ್ಲ. ಕಾರ್ಮಿಕರ ಕೊರತೆ ಮತ್ತಿತರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಖಾಸಗಿ ವಲಯದವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಅಲ್ಲದೇ, ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಕಡ್ಡಾಯಗೊಳಿಸಲು ನಮ್ಮ ಸಮ್ಮತಿ ಇದೆ. ಶಿಕ್ಷಣದಲ್ಲಿ ಕನ್ನಡ ಕಡ್ಡಾಯಗೊಳಿಸದೆ ಆಡಳಿತದಲ್ಲಿ ಕನ್ನಡ ಕಡ್ಡಾಯಗೊಳಿಸಲು ಸಾಧ್ಯವಿಲ್ಲ. ಆದರೂ ಸುಪ್ರಿಂ ಕೋರ್ಟನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಕೆ ಸಾಧ್ಯವೇ ಎಂದು ಪರಿಶೀಲಿಸುತ್ತೇವೆ. ಬಂದ್ ಕರೆ ಹಿಂದೆ ಪಡೆಯುವಂತೆ ಕನ್ನಡಪರ ಸಂಘಟನೆಗಳಿಗೂ ಮನವಿ ಮಾಡುತ್ತೇನೆ.

ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಿ.ಟಿ.ರವಿ, ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಸಿದ್ದರಾಮಯ್ಯ ಅವರು ಒತ್ತಾಯಿಸಿರುವುದು ಹಾಸ್ಯಾಸ್ಪದ. ಸರೋಜಿನಿ ಮಹಿಷಿ ವರದಿ ಮಂಡನೆಯಾದ ದಿನದಿಂದಲೂ ಸಿದ್ದರಾಮಯ್ಯ ಹಾಗೂ ಅವರು ಪ್ರತಿನಿಧಿಸುವ ಪಕ್ಷವೇ ಅಧಿಕಾರದಲ್ಲಿ ಇರುವುದು. ಆಗೆಲ್ಲ ಸರೋಜಿನಿ ಮಹಿಷಿ ವರದಿ ಜಾರಿಗೆ ಯಾವುದೇ ಪ್ರಯತ್ನ ಮಾಡದೇ ಅಧಿಕಾರದಿಂದ ಇಳಿದ ತಕ್ಷಣ ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸುತ್ತಿದ್ದಾರೆ. ಹೀಗೆ ಎಂದರೆ ಏನು ಹೇಳುವುದು. ಅವರನ್ನು ನಂಬುವವರ ಬಗ್ಗೆಯೂ ನಾನು ಬಾಯಿ ಬಿಟ್ಟು ಏನನ್ನೂ ಹೇಳಬೇಕಾಗಿಲ್ಲ ಎಂದಿದ್ದಾರೆ.

Recommended For You

About the Author: user

Leave a Reply

Your email address will not be published. Required fields are marked *