ಬಡರೋಗಿಗಳಿಗೆ ಯಡಿಯೂರಪ್ಪ ಸರ್ಕಾರದಿಂದ ಗುಡ್ ನ್ಯೂಸ್?

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಬಡರೋಗಿಗಳಿಗೆ ಕ್ಯಾಂಟೀನ್ ವ್ಯವಸ್ಥೆ ಮಾಡುವ ಕುರಿತು ಯಡಿಯೂರಪ್ಪ ಸರ್ಕಾರ ಚಿಂತನೆ ನಡೆಸಿದೆ. ಆರೋಗ್ಯ ಸಚಿವ ಶ್ರೀರಾಮುಲು ಈ ಮಹಾತ್ವಾಕಾಂಕ್ಷೆಯ ಯೋಜನೆ ತರಲು ಉದ್ದೇಶಿಸಿದ್ದು, ಸಿಎಂ ಯಡಿಯೂರಪ್ಪ ಜೊತೆ ಚರ್ಚಿಸಿದ ಬಳಿಕ ಅಂತಿಮ ತೀರ್ಮಾನ ನಡೆಸಲು ನಿರ್ಧರಿಸಿದ್ದಾರೆ.

ರಾಜ್ಯದ ಎಲ್ಲ ತಾಲೂಕು ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಬಡರೋಗಿಗಳಿಗಾಗಿ ಕ್ಯಾಂಟೀನ್ ವ್ಯವಸ್ಥೆ ಮಾಡಲು ಬಿಎಸ್‌ವೈ ಸರ್ಕಾರ ನಿರ್ಧರಿಸಿದ್ದು, ಅಂದುಕೊಂಡಂತೆ ಆದ್ರೆ ಈ ಬಾರಿ ಬಜೆಟ್‌ನಲ್ಲಿ ಈ ವ್ಯವಸ್ಥೆ ಜಾರಿಮಾಡಲಾಗುವುದು. ಅಲ್ಲದೇ ಬಿಜೆಪಿ ಸರ್ಕಾರದ ಕ್ಯಾಂಟೀನ್‌ಗೆ ಸ್ವರಾಜ್ ಕ್ಯಾಂಟೀನ್ ಎಂದು ಹೆಸರಿಡಲು ಚಿಂತನೆ ನಡೆದಿದೆ.

ಆರೋಗ್ಯ ಇಲಾಖೆ ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಯೋಜನೆಗೆ ಬೇಕಾಗುವ ಅಂದಾಜು ವೆಚ್ಚ, ಪೂರ್ವ ತಯಾರಿ ಕುರಿತು ಆರ್ಥಿಕ ಇಲಾಖೆ ಜತೆ ಚರ್ಚೆ ನಡೆಸಲಾಗಿದೆ.

Recommended For You

About the Author: user

Leave a Reply

Your email address will not be published. Required fields are marked *