ಪ್ರವಾಹ ಸಂತ್ರಸ್ತರಿಗಾಗಿ ಉಪವಾಸ ಸತ್ಯಾಗ್ರಹಕ್ಕೂ ಸಿದ್ಧ- ಲಕ್ಷ್ಮೀ ಹೆಬ್ಬಾಳ್ಕರ್​

ಬೆಳಗಾವಿ: ಜಿಲ್ಲೆಯ ಗ್ರಾಮೀಣ ಕ್ಷೇತ್ರದಲ್ಲಿ ಮನೆ ಕಳೆದುಕೊಂಡವರಿಗೆ ಈವರೆಗೂ ಸೂಕ್ತ ಪರಿಹಾರ ಸಿಕ್ಕಿಲ್ಲ. ಸರ್ಕಾರ ರಚನೆ, ಸಚಿವ ಸಂಪುಟ ರಚನೆಗಾಗಿ ಕಾಲಹರಣ ಮಾಡುತ್ತಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಕ್ರೇತ್ರದ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಜಿಲ್ಲೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಡವರಿಗೆ ಕಡಿಮೆ ಪರಿಹಾರ. ಉಳ್ಳವರಿಗೆ ಹೆಚ್ಚಿನ ಪರಿಹಾರ ವಿತರಣೆ ಮಾಡುತ್ತಿದ್ದಾರೆ. ಪ್ರವಾಹ ಸಂತ್ರಸ್ತರಿಗೆ ಬಗ್ಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಕಾಂಗ್ರೆಸ್​ ಶಾಸಕಿ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದಿಂದ ಈವರೆಗೂ ಒಂದೇ ಒಂದು ರುಪಾಯಿ ಬಿಡುಗಡೆ ಮಾಡಿಲ್ಲ. ಪ್ರವಾಹ ಸಂತ್ರಸ್ತರು ಭಯ ಪಡಬೇಕಿಲ್ಲ. ಸಂತ್ರಸ್ತರಿಗಾಗಿ ನಾನು ಬೆಂಗಳೂರಿನಲ್ಲಿ ಭಿಕ್ಷೆ ಬೇಡುತ್ತೇನೆ. ಅಗತ್ಯ ಬಿದ್ದರೇ ನಾನು ನೀವು ಸೇರಿ ಉಪವಾಸ ಸತ್ಯಾಗ್ರಹ ಮಾಡುವ ಎಂದು ಹೆಬ್ಬಾಳ್ಕರ್​ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಉತ್ತರ ಕರ್ನಾಟಕದಲ್ಲಿ ಆದ ಪ್ರವಾಹ ಸಂತ್ರಸ್ತರ ಗೋಳನ್ನ ಅಧಿವೇಶನದಲ್ಲಿ ಧ್ವನಿ ಎತ್ತುವೆ. ಅಧಿವೇಶನ ಬಾವಿಯಲ್ಲಿ ಇಳಿದು ಪ್ರತಿಭಟಿಸುವೆ. ಈ ಮೂಲಕ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುವುದಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದರು.

Recommended For You

About the Author: user

Leave a Reply

Your email address will not be published. Required fields are marked *