ಸಚಿವ ಸಂಪುಟ ಸಭೆಯ ನಂತರ ಮುಖ್ಯಮಂತ್ರಿಯವರ ಪತ್ರಿಕಾಗೋಷ್ಠಿಯ ಪ್ರಮುಖ ಅಂಶಗಳು

ಬೆಂಗಳೂರು: ಈಗಾಗಲೇ ಮಳೆ ಪ್ರಾರಂಭವಾಗಿದ್ದು ರಾಜ್ಯದಲ್ಲಿ ಎಲ್ಲಿಯೂ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರಗಳ ಕೊರತೆ ಆಗದಂತೆ ಕ್ರಮವಹಿಸಿ ಸರಿಯಾದ ರೀತಿಯಲ್ಲಿ ವಿತರಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸೂಚಿಸಲಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಿಂದಾಗಿ ಭತ್ತದ ಬೆಳೆಯ ಹಾನಿಯಾಗಿದ್ದು ಈ ಬಗ್ಗೆ ಕೃಷಿ ಆಯುಕ್ತರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ವಾಸ್ತವಿಕ ಬೆಳೆಹಾನಿಯ ಬಗ್ಗೆ ವರದಿಯನ್ನು ನೀಡುವಂತೆ ಸೂಚಿಸಲಾಗಿದೆ.

  • ಹೊಲದಲ್ಲಿ ಬೆಳೆದಿರುವ ಹೂ ಗಳು ಮಳೆಯಿಂದ ಹಾನಿಯಾಗಿದ್ದು ಈ ಬಗ್ಗೆಯೂ ಜಿಲ್ಲಾಧಿಕಾರಿಯವರಿಂದ ವರದಿಯನ್ನು ಪಡೆದು ಸೂಕ್ತ ಪರಿಹಾರ ನೀಡುವ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.
  • ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಡಿತರ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ನಡೆಸಲು ಸೂಚಿಸಲಾಗಿದೆ. ಈಗಾಗಲೇ ಶೇಕಡಾ 50ರಷ್ಟು ಪಡಿತರ ವಿತರಣೆಯನ್ನು ಮಾಡಲಾಗಿದ್ದು, ಇನ್ನುಳಿದ ಪಡಿತರ ವಿತರಣೆಯನ್ನು ಇನ್ನು ಎರಡು ಮೂರು ದಿನಗಳಲ್ಲಿ ಪೂರ್ಣಗೊಳಿಸಲಾಗುವುದು.
  • ಕೇಂದ್ರ ಸರ್ಕಾರದ ಪಡಿತರ ವ್ಯವಸ್ಥೆಯನ್ನು ಕೂಡಲೇ ವಿತರಿಸಲಾಗುವುದು ಎಂದು ತಿಳಿಸಿದರು.
  • ಎರಡುವರೆ ಲಕ್ಷ ಕುಟುಂಬದವರಿಗೆ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ್ದರೂ ವಿವಿಧ ಕಾರಣಗಳಿಗೆ ಸಿಕ್ಕಿಲ್ಲವೆಂದು ದೂರು ಬಂದಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಹಾಗೂ ಸದ್ಯ ಅವರಿಗೆ ತಾತ್ಕಾಲಿಕವಾಗಿ ಪಡಿತರ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
  • ಕೋವಿಡ್ – 19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಇನ್ನು 15 ದಿನಗಳವರೆಗೆ ಲಾಕ್‍ಡೌನ್ ಮುಂದುವರೆಸಬೇಕು ಎನ್ನುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಒಕ್ಕೊರಲಿನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಧಾನಮಂತ್ರಿಯವರೊಂದಿಗೆ ದಿನಾಂಕ: 11.04.2020ರಂದು ನಡೆಯುವ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು.
  • ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕ ಮಾಡಲಾಗುವುದು.

Recommended For You

About the Author: user

Leave a Reply

Your email address will not be published. Required fields are marked *