ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ‌ ತಡೆಯಬೇಕಾದರೆ ಇಂತಹ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.

ಸದ್ಯ ಕೊರೊನಾ ಸೋಂಕಿನಿಂದ ನಮ್ಮನ್ನು ರಕ್ಷಿಸಲು ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಆರೋಗ್ಯವನ್ನು ಪಣಕ್ಕಿಟ್ಟು ಶ್ರಮಿಸುತ್ತಿದ್ದಾರೆ. ಅವರಿಗೆ ಸಹಕರಿಸುವುದು ನಮ್ಮ ಕರ್ತವ್ಯ. ಗಾಳಿ ಸುದ್ದಿಯಿಂದ ಪ್ರಚೋದನೆಗೊಳಗಾಗದೆ ಜನ‌ ಸಂಯಮದಿಂದ ವರ್ತಿಸಬೇಕೆಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Recommended For You

About the Author: user

Leave a Reply

Your email address will not be published. Required fields are marked *