ವಿಶಾಖಪಟ್ಟಣಂನಲ್ಲಿ ವಿಶಾನೀಲ ಸೋರಿಕೆ ಪ್ರಕರಣ: ಮೃತರ ಕುಟುಂಬಕ್ಕೆ ತಲಾ ಒಂದು ಕೋಟಿ ರೂ. ಪರಿಹಾರ ಘೋಷಣೆ ಮಾಡಿದ ಜಗನ್..!

ವಿಶಾಖಪಟ್ಟಣಂ: ವಿಶಾಖಪಟ್ಟಣಂನಲ್ಲಿ ವಿಶಾನೀಲ ಸೋರಿಕೆಯಾಗಿದ್ದು, 10 ಜನ ಸಾವನ್ನಪ್ಪಿದ್ದು, ಸಾವಿರಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು ಆಸ್ಪತ್ರೆ ಪಾಲಾಗಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಜಗನ್ ಮೋಹನ್ ರೆಡ್ಡಿ, ಮೃತರ ಕುಟುಂಬಕ್ಕೆ ತಲಾ ಒಂದು ಕೋಟಿ ರೂಪಾಯಿ ಪರಿಹಾರ ಧನ ಘೋಷಣೆ ಮಾಡಿದ್ದಾರೆ. ಅಲ್ಲದೇ, ತೀವ್ರ ಅಸ್ವಸ್ಥಗೊಂಡವರಿಗೆ ತಲಾ 10 ಲಕ್ಷ ರೂಪಾಯಿ ಘೋಷಣೆ ಮಾಡಿದ್ದಾರೆ. ಚಿಕಿತ್ಸೆಗೆ ಬೇಕಾಗುವ ಖರ್ಚು ವೆಚ್ಚವನ್ನ ಸರ್ಕಾರವೇ ಭರಿಸಲಿದೆ ಎಂದು ಜಗನ್ ಹೇಳಿದ್ದಾರೆ.

Recommended For You

About the Author: user

Leave a Reply

Your email address will not be published. Required fields are marked *