Top

ಆದಾಯ ಕಳೆದುಕೊಂಡ ಆಟೋ, ಟ್ಯಾಕ್ಸಿ ಚಾಲಕರಿಗೆ ಷರತ್ತುಬದ್ಧ ಪರಿಹಾರ ಧನ..?!

ಆದಾಯ ಕಳೆದುಕೊಂಡ ಆಟೋ, ಟ್ಯಾಕ್ಸಿ ಚಾಲಕರಿಗೆ ಷರತ್ತುಬದ್ಧ ಪರಿಹಾರ ಧನ..?!
X

ಕೋವಿಡ್-19 ಲಾಕ್ಡೌನ್ ಹಿನ್ನೆಲೆ ಆದಾಯ ಕಳೆದುಕೊಂಡಿರುವ ಆಟೋ/ಟ್ಯಾಕ್ಸಿ ಚಾಲಕರಿಗೆ ಸರ್ಕಾರ 5000 ರೂ.ಪರಿಹಾರ ಧನ‌ ನೀಡ್ತಿದೆ. ಈ ಯೋಜನೆ ಪಡೆಯಲು ಯಾವೆಲ್ಲಾ ಚಾಲಕರು ಅರ್ಹರಾಗಿದ್ದಾರೆ..? ಸರ್ಕಾರದ‌ ಷರತ್ತುಗಳೇನು..? ಅವುಗಳ ಬಗ್ಗೆ ಇಲ್ಲಿದೆ ಮಾಹಿತಿ.

1.. ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲನೆ ಮಾಡಲು ಚಾಲನಾ ಅನುಜ್ಞಾ ಪತ್ರ ಮತ್ತು ಬ್ಯಾಡ್ಜ್ ಹೊಂದಿರುವವರು ಮಾತ್ರ ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ.

2.. ಫಲಾನುಭವಿಗಳು ಆಟೋರಿಕ್ಷಾ/ಟ್ಯಾಕ್ಸಿ ಚಾಲಕರಾಗಿದ್ದು ದಿನಾಂಕ: 01-03-2020ಕ್ಕೆ ಚಾಲ್ತಿಯಲ್ಲಿರುವ ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಪೋರ್ಟಲ್‌ನಲ್ಲಿ ನಮೂದಿಸಬೇಕಾಗಿರುತ್ತದೆ.

3.. ಚಾಲಕರ ಆಧಾರ್ ಕಾರ್ಡ್ ವಿವರಗಳನ್ನು ಪೋರ್ಟಲ್‌ನಲ್ಲಿ ನಮೂದಿಸಬೇಕಾಗಿರುತ್ತದೆ.

4.. ಚಾಲಕರ ಬ್ಯಾಂಕ್ ಅಕೌಂಟ್ ವಿವರ, ಸಂಬಂಧಪಟ್ಟ ಬ್ಯಾಂಕ್ ನ IFSC ಕೋಡ್, MICR ಕೋಡ್‌ಗಳ ವಿವರಗಳನ್ನು ಪೋರ್ಟಲ್‌ನಲ್ಲಿ ನಮೂದಿಸಬೇಕಾಗಿರುತ್ತದೆ.

5.. ಚಾಲಕರು ಚಾಲನೆ ಮಾಡುವ ವಾಹನದ ನೋಂದಣಿ ಸಂಖ್ಯೆ ವಿವರಗಳನ್ನು ಪೋರ್ಟಲ್‌ನಲ್ಲಿ ನಮೂದಿಸಬೇಕಾಗಿರುತ್ತದೆ. ವಾಹನ್ -4 ತಂತ್ರಾಂಶದಿಂದ ವಿವರಗಳನ್ನು ನೇರವಾಗಿ ಪಡೆಯುವುದು.

6.. ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಸಾರಿಗೆ ಇಲಾಖೆಯ ಸಾರಥಿ-4 ತಂತ್ರಾಂಶದಿಂದ ನೇರವಾಗಿ ಪಡೆದುಕೊಳ್ಳಬೇಕು.

7.. ಆಟೋರಿಕ್ಷಾ/ಟ್ಯಾಕ್ಸಿ ಚಾಲಕರು ತಮ್ಮ ದೈನಂದಿನ ಉದ್ಯೋಗವನ್ನು ನಡೆಸಲಾಗದ ಆದಾಯ ಕಳೆದುಕೊಂಡಿರುವ ಬಗ್ಗೆ ಸ್ವಯಂ ಘೋಷಣೆ ಮಾಡಬೇಕು.

8.. ಈ ಯೋಜನೆಯನ್ನು ಜಾರಿಗೊಳಿಸಲು ಅರ್ಹ ಚಾಲಕರು ತಮ್ಮ ಅರ್ಜಿಗಳನ್ನು ''ಸೇವಾಸಿಂಧು" ವಿನ ಮುಖಾಂತರ ಸಲ್ಲಿಸಲು ವ್ಯವಸ್ಥೆ ಮಾಡಬೇಕಾಗಿರುತ್ತದೆ. ಈ ಬಗ್ಗೆ ''ಸೇವಾಸಿಂಧು" ವಿನಲ್ಲಿ ಸೂಕ್ತ ವ್ಯವಸ್ಥೆ ಮಾಡುವಂತೆ ಇ-ಆಡಳಿತ ಇಲಾಖೆಯನ್ನು ಕೋರಬಹುದಾಗಿದೆ.

9.. ಅರ್ಹ ಫಲಾನುಭವಿಗಳಿಗೆ ಆಧಾರ್ ಸಂಖ್ಯೆಯ ಮೂಲಕ DBT ಮಾಡಬೇಕು ಅಥವಾ ಆನ್‌ಲೈನ್ ಮೂಲಕ ಬ್ಯಾಂಕಿಗೆ ಜಮಾ ಮಾಡಬೇಕು.

10.. ಫಲಾನುಭವಿಗಳು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಲು ಅನುವಾಗುವಂತೆ ಅರ್ಹ/ಅನರ್ಹ ಅರ್ಜಿದಾರರ ಪಟ್ಟಿಯನ್ನು ತಂತ್ರಾಂಶದಲ್ಲಿ ಅಳವಡಿಸಿಕೊಳ್ಳಬೇಕು.

Next Story

RELATED STORIES