Top

ಲಂಡನ್‌ನಿಂದ ಬೆಂಗಳೂರಿಗೆ ಬಂದಿಳಿದ 320 ಅನಿವಾಸಿ ಭಾರತೀಯರು..!

ಲಂಡನ್‌ನಿಂದ ಬೆಂಗಳೂರಿಗೆ ಬಂದಿಳಿದ 320 ಅನಿವಾಸಿ ಭಾರತೀಯರು..!
X

ಕೋವಿಡ್-19 ಲಾಕ್ ಡೌನ್ ಹಿನ್ನೆಲೆ ದೇಶಾದ್ಯಂತ ವಿಮಾನಯಾನ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿತ್ತು. ಅನಿವಾಸಿ ಭಾರತೀಯರ ಆಗಮನಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದ್ದು, ಅದರಂತೆ ಲಂಡನ್‌ನಲ್ಲಿರುವ ಅನಿವಾಸಿ ಭಾರತೀಯರನ್ನು ಹೊತ್ತು ತಂದ ವಿಮಾನವು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ, ಲಂಡನ್‌ನಿಂದ ರಾಜ್ಯಕ್ಕೆ ಬಂದಿಳಿದ ಮೊದಲ ವಿಮಾನದಲ್ಲಿ ಮಕ್ಕಳು ಸೇರಿದಂತೆ ಒಟ್ಟು 326 ಪ್ರಯಾಣಿಕರು ಆಗಮಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ, ಆರೋಗ್ಯ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ಪ್ರಯಾಣಿಕರ ಕೋವಿಡ್-19 ಆರೋಗ್ಯ ತಪಾಸಣೆಗಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗತ್ಯ ಸಕಲ ಸಿದ್ದತೆ ಮಾಡಿಕೊಳ್ಳಲಾಗಿತ್ತು. ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರತಿಯೊಬ್ಬರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಪ್ರತಿಯೊಬ್ಬ ಪ್ರಯಾಣಿಕರೂ ಕ್ವಾರಂಟೈನ್‌ನಲ್ಲಿ ಇರುವುದು ಕಡ್ಡಾಯವಾಗಿದೆ. ಹೀಗಾಗಿ ಹೋಟೆಲ್‌ಗಳನ್ನು ಬಳಸಲಾಗುತ್ತಿದ್ದು, ಅಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ. ಕ್ವಾರಂಟೈನ್ ವೆಚ್ಚವನ್ನು ಪ್ರಯಾಣಿಕರೇ ಭರಿಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

Next Story

RELATED STORIES