Top

'ದೇವರ ದರ್ಶನಕ್ಕಾಗಿ ಆನ್​ಲೈನ್ ನೇರ ಪ್ರಸಾರ ವ್ಯವಸ್ಥೆ' - ಸಚಿವ ಕೋಟ ಶ್ರೀನಿವಾಸ್​ ಪೂಜಾರಿ

ದೇವರ ದರ್ಶನಕ್ಕಾಗಿ ಆನ್​ಲೈನ್ ನೇರ ಪ್ರಸಾರ ವ್ಯವಸ್ಥೆ - ಸಚಿವ ಕೋಟ ಶ್ರೀನಿವಾಸ್​ ಪೂಜಾರಿ
X

ಬೆಂಗಳೂರು: ದೇವರ ದರ್ಶನಕ್ಕಾಗಿ ಆನ್​ಲೈನ್ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗವುದು ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ್​ ಪೂಜಾರಿ ಅವರು ಹೇಳಿದರು.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನ್​ಲೈನ್ ಮೂಲಕ ಭಕ್ತರು ಸೇವಾ ವೆಚ್ಚ ಭರಿಸಬಹುದು. ಭಕ್ತರಿಗೆ ಮನೆಗೇ ಪ್ರಸಾದ ಕಳಿಸುವ ಕೆಲಸ ಮಾಡುತ್ತೇವೆ. ಪೂಜೆಯ ನೇರ ಪ್ರಸಾರವನ್ನು ಮಾಡುವ ಪ್ರಯತ್ನ ಮಾಡುತ್ತೇವೆ ಎಂದು ಅವರು ತಿಳಿಸಿದರು.

ಇನ್ನು ಮಂಗಳಾರತಿ, ಅರ್ಚನೆ,ಅಷ್ಟೋತ್ತರ ಸೇರಿ 15 ಸೇವೆಗಳಿರುತ್ತೇವೆ. ಭಕ್ತರು ಬೇಕಾದ ಸೇವೆಗೆ ಹಣ ಪಾವತಿಸಬೇಕು. ಅಂತವರ ಹೆಸರಿನಲ್ಲಿ ಪೂಜೆಯನ್ನು ನೆರವೇರಿಸಲಾಗುತ್ತದೆ0 ಬಳಿಕ ಅವರಿಗೆ ಪ್ರಸಾದವನ್ನು ಅವರ ಮನೆಗೆ ಕಳಿಸುತ್ತೇವೆ. ವೆಬ್​ಸೈಟ್ ಮೂಲಕ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲಾಗುವುದು. ಈಗಾಗಲೇ ಸಂಸ್ಥೆಗಳು ಆನ್​ಲೈನ್ ನೇರ ಪ್ರಸಾರಕ್ಕೆ ಬಂದಿವೆ ಎಂದು ಅವರು ಮಾಹಿತಿ ನೀಡಿದರು.

ಸದ್ಯ ೧೫ ಜಿಲ್ಲೆಗಳ ದೇಗುಲ ಪೂಜಾ ಪದ್ಧತಿಯನ್ನು ನೇರಪ್ರಸಾರ ಮಾಡುವುದು ಉದ್ದೇಶವಾಗಿದೆ. ಬೆಂಗಳೂರು ಬನಶಂಕರಿ, ಸವದತ್ತಿ ಯಲ್ಲಮ್ಮ, ಮೈಸೂರು ಚಾಮುಂಡಿ, ನಂಜನಗೂಡು ಶ್ರೀಕಂಠೇಶ್ವರ, ಕಟೀಲು ಸೇರಿದಂತೆ ಹಲವು ದೇಗುಲಗಳಲ್ಲಿ ಪೂಜೆಯ ನೇರ ಪ್ರಸಾರ ಮಾಡುತ್ತೇವೆ. ಇದರ ಬಗ್ಗೆ ಇನ್ನೆರಡು ದಿನಗಳಲ್ಲಿ ಅಧಿಕೃತ ನಿರ್ಧಾರ ಹೊರಬೀಳಲಿದ್ದು, ಸಿಎಂ ಅವರೇ ಇದರ ಬಗ್ಗೆ ಚಾಲನೆ ನೀಡುತ್ತಾರೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ್​ ಪೂಜಾರಿ ಅವರು ತಿಳಿಸಿದ್ದಾರೆ.

Next Story

RELATED STORIES