‘ಬಿಜೆಪಿಯ ಜನಪ್ರತಿನಿಧಿಗಳು ಅಧಿಕಾರಿಗಳನ್ನು ಬ್ಲಾಕ್​ಮೇಲ್ ಮಾಡುತ್ತಿದ್ದಾರೆ’

ಕೋಲಾರ: ಕೋಲಾರ ಜಿಲ್ಲೆಯಲ್ಲಿ ಬಿಜೆಪಿಯ ಜನಪ್ರತಿನಿಧಿಗಳು ಅಧಿಕಾರಿಗಳನ್ನು ಬ್ಲಾಕ್​ಮೇಲ್ ಮಾಡುತ್ತಿದ್ದಾರೆ ಎಂದು ಮಾಲೂರು ಕಾಂಗ್ರೆಸ್​ ಶಾಸಕ ಕೆ.ವೈ ನಂಜೇಗೌಡ ಅವರು ಆರೋಪ ಮಾಡಿದ್ದಾರೆ.

ಕೋಲಾರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಗಾಳಿಗೆ ಬಂದ ಜನಪ್ರತಿನಿಧಿಗಳು ಕೋಲಾರ ಜಿಲ್ಲೆಯಲ್ಲಿ ಅಧಿಕಾರ ನಡೆಸುತ್ತಿದ್ದಾರೆ. ಜಿಲ್ಲೆಯ ಅಧಿಕಾರಿಗಳ ಬಳಿ ಬಿಜೆಪಿ ಸಚಿವರು, ಸಂಸದರಯ ಪರ್ಸೆಂಟೇಜ್ ಫಿಕ್ಸ್ ಮಾಡಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಅವರು ಜಿಲ್ಲಾ ಉಸ್ತುವಾರಿ ಸಚಿವ ನಾಗೇಶ್ ಹಾಗೂ ಸಂಸದ ಮುನಿಸ್ವಾಮಿ ಹೆಸರು ಹೇಳದೇ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಅನಿವಾರ್ಯವಾಗಿ ಅಧಿಕಾರಿಗಳು ಈ ಗಾಳಿಗೆ ಬಂದ ಜನಪ್ರತಿನಿಧಿಗಳಿಗೆ ಶರಣಾಗಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರೆ ಹೆಚ್ಚಾಗಿದ್ದು, ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸಿದರೆ ಉತ್ತಮ. ಮುಂದಿನ ದಿನಗಳಲ್ಲಿ ದಾಖಲೆ ಸಮೇತ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಶಾಸಕ ಕೆ.ವೈ ನಂಜೇಗೌಡ ಅವರು ಜಿಲ್ಲಾಡಳಿತ ಹಾಗೂ ಜಿಲ್ಲೆಯ ಬಿಜೆಪಿ ಉಸ್ತುವಾರಿ ನಾಯಕರಿಗೆ, ಸಂಸದರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

Recommended For You

About the Author: user

Leave a Reply

Your email address will not be published. Required fields are marked *