ಸಿಎಂ ಬಿಎಸ್​ ಯಡಿಯೂರಪ್ಪಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಪರಿವಾರ ಮತ್ತು ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಕೇಂದ್ರ ಸರ್ಕಾರ ಗೆಜೆಟಿಯರ್​ನಲ್ಲಿ ಆದೇಶ ಹೊರಡಿಸಿ ಎರಡು ತಿಂಗಳು ಕಳೆದಿದೆ. ಆದರೆ, ರಾಜ್ಯ ಸರ್ಕಾರ ಇನ್ನೂ ಗೆಜೆಟಿಯರ್ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.​

ಸದ್ಯ ಈ ಸಂಬಂಧ ರಾಜ್ಯ ಸರ್ಕಾರ ಕೂಡಲೇ ಅಧಿಕೃತವಾಗಿ ರಾಜ್ಯಪತ್ರ ಹೊರಡಿಸಬೇಕು. ಆ ವರ್ಗದ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಲಿದ್ದು, ಪ್ರಸ್ತುತ ಕೆಪಿಎಸ್​ಸಿ ಪರೀಕ್ಷೆಗಳು ನಡೆಯಲಿವೆ ಜೊತೆಗೆ ಶಾಲೆಯಲ್ಲಿ ಪ್ರವೇಶ ಪ್ರಕ್ರಿಯೆ ಆರಂಭವಾಗಿವೆ. ಹೀಗಾಗಿ ಮೀಸಲಾತಿಯಡಿ ಅವರಿಗೆ ಅವಕಾಶ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನು ಈ ಎರಡು ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ನಮ್ಮ ಸರ್ಕಾರದ ಅವಧಿಯಲ್ಲಿ ಶಿಫಾರಸು ಮಾಡಿದ್ದೇವು. ಇದೀಗ ತಡವಾಗಿಯಾದರು ಕೇಂದ್ರ ಸರ್ಕಾರ ಗೆಜೆಟಿಯರ್​ನಲ್ಲಿ ಆದೇಶ ಹೊರಡಿಸಿದೆ. ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಈ ಕೂಡಲೇ ರಾಜ್ಯ ಸರ್ಕಾರವೂ ಅಧಿಕೃತ ಆದೇಶ ಹೊರಡಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಬಿಎಸ್​ವೈಗೆ ಬರೆದಿರುವ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

Recommended For You

About the Author: user

Leave a Reply

Your email address will not be published. Required fields are marked *